More

    ಪಠ್ಯೇತರ ಚಟುವಟಿಕೆಯಿಂದ ಮಕ್ಕಳ ಪ್ರತಿಭೆ ಅನಾವರಣ; ಸಿದ್ಧಗಂಗಾ ಶಾಲೆ ಸಾಂಸ್ಕೃತಿಕ ಉತ್ಸವ

    ಬೆಂಗಳೂರು : ವಿದ್ಯಾರ್ಥಿಗಳಿಗೆ ಪಠ್ಯದ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳಲ್ಲಿರುವ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜು ಮತ್ತು ಸಂಸೋಧನಾ ಸಂಸ್ಥೆಯ ನಿರ್ದೇಶಕ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಿಸಿದ್ದಾರೆ. ಶ್ರೀ ಶಿವಕುಮಾರ ಸ್ವಾಮೀಜಿ ವಿದ್ಯಾಪೀಠ ಟ್ರಸ್ಟ್‌ನ ವತಿಯಿಂದ ಸಿದ್ಧಗಂಗಾ ಶಾಲೆಯಲ್ಲಿ ‘ಕ್ರಿಡಾತರಂಗ’ಶೀರ್ಷಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶೈಕ್ಷಣಿಕ ಚಟುವಟಿಕೆಗಳು ಮಾತ್ರವಲ್ಲದೆ ಇತರೆ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಪ್ರತಿ ಶಾಲೆಗಳು ಆದ್ಯತೆ ನೀಡಬೇಕು. ಅದರಿಂದ ಹಲವು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹೊರಬರುತ್ತದೆ. ಆ ನಿಟ್ಟಿನಲ್ಲಿ ಸಿದ್ಧಗಂಗಾ ಶಾಲೆಯು ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. ಉತ್ಸವದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಪ್ರಾಂಶುಪಾಲೆ ಟಿ.ಎಂ.ಹಂಸಾ ಶಾಲೆಯ ವಾರ್ಷಿಕ ವರದಿ ವಾಚನ ಮಾಡಿದರು. ವಿದ್ಯಾರ್ಥಿಗಳು ಪ್ರದರ್ಶಿಸಿದ ಭಾರತೀಯ ಸಂಸ್ಕೃತಿ ಬಿಂಬಿಸುವ ನೃತ್ಯಗಳು ನೋಡುಗರ ಕಣ್ಮನ ಸೆಳೆದವು. ಕಾರ್ಯಕ್ರಮದಲ್ಲಿ ಅರ್ಜುನ ಪ್ರಶಸ್ತಿ ಪುರಸ್ಕೃತ ಶಭಾ ನಾರಾಯಣ್, ಆಡಳಿತ ಮಂಡಳಿಯ ಸದಸ್ಯರಾದ ಎಸ್. ಮೃತ್ಯುಂಜಯ, ಡಾ.ಆರ್.ಲೋಕಪ್ರಕಾಶ, ಟಿ.ಎಸ್. ತುಳಸಿಕುಮಾರ್, ಚಿತ್ರನಟ ರಿಷಿ, ನಿರ್ದೇಶಕ ವಿಕಾಸ್ ಪಂಪಾಪತಿ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts