ಗುಳೇದಗುಡ್ಡ: ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ಪಿಎಸ್‌ಐ ಸಿದ್ದಪ್ಪ ಯಡಹಳ್ಳಿ ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಿಮ್ಮ ಸುತ್ತಮುತ್ತಲಲ್ಲಿ ಅಪರಿಚಿತ ಸಂಶಯಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ರಾತ್ರಿ ಮನೆಯ ಕಿಟಕಿ, ಬಾಗಿಲುಗಳನ್ನು ಭದ್ರವಾಗಿ ಹಾಕಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಕೀರಪ್ಪ ಚನ್ನಪ್ಪಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಈಶ್ವರಪ್ಪ, ಶರಣಪ್ಪ ,ರಮೇಶ ಹುಲ್ಲೂರು, ಬಸವರಾಜ ಮಠಪತಿ, ಭಾರತಿ ರಾಥೋಡ, ಪ್ರಕಾಶ ಅಡಿವೇರ, ಅನ್ನಪೂರ್ಣ ಹಿರೇಮನಿ, ಅಶೋಕ ಪೂಜಾರ ಇದ್ದರು.