More

    ನೋಂದಣಿ ಕಾರ್ಯ ಸ್ಥಗಿತ : ಮೇ 23 ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಬಂದ್​

    ಬೆಂಗಳೂರು : ಕೋವಿಡ್-19 ವೈರಸ್ 2ನೇ ಅಲೆ ವೇಗವಾಗಿ ಹರಡುತ್ತಿರುವ ಪರಿಣಾಮ ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್​​​ (ಉಪನೋಂದಣಿ) ಕಚೇರಿಗಳಿಗೆ ಮೇ 23 ರವರೆಗೂ ರಜೆ ನೀಡಲಾಗಿದೆ. ಈ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು ಇಂದು ಆದೇಶ ಹೊರಡಿಸಿದ್ದಾರೆ.

    ಕರೊನಾ ಸೋಂಕು ಹೆಚ್ಚಾಗಿದ್ದರೂ ಉಪನೋಂದಣಿ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಜನರು ಸಹ ನೋಂದಣಿಗೆ ಬರುತ್ತಿದ್ದರು. ನೋಂದಣಿ ಪ್ರಕ್ರಿಯೆಯ ಸಂದರ್ಭದಲ್ಲಿ ಅನಿವಾರ್ಯವಾಗಿ ಬಯೋಮೆಟ್ರಿಕ್ ಮಾಡಿಸಲು, ಫೋಟೋ ತೆಗೆಯಲು ಮಾಸ್ಕ್ ತೆಗೆಯಬೇಕಾಗಿತ್ತು. ಇದರ ವಿರುದ್ಧ ಸಾರ್ವಜನಿಕರಲ್ಲಿ ಮತ್ತು ಇಲಾಖೆ ಅಧಿಕಾರಿ-ಸಿಬ್ಬಂದಿಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಕರೊನಾ ಸೋಂಕಿಗೆ ಸಬ್​​​ರಿಜಿಸ್ಟ್ರಾರ್ ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ಮೃತಪಟ್ಟಿದ್ದರು.

    ಇದನ್ನೂ ಓದಿ: ರೆಮ್‌ಡಿಸಿವಿರ್ ಕಾಳಸಂತೆ : ಬಿಬಿಎಂಪಿ ನೌಕರ ಸೇರಿ ನಾಲ್ವರ ಬಂಧನ

    ಈ ಕುರಿತು ವಿಜಯವಾಣಿ ಮೇ 1 ರಂದು ಸುದ್ದಿ ಪ್ರಕಟ ಮಾಡಿತ್ತು. ಈ ಹಿನ್ನೆಲೆಯಲ್ಲಿ ಇದರ ಬಗ್ಗೆ ಹಿರಿಯ ಅಧಿಕಾರಿಗಳ ಅಭಿಪ್ರಾಯ ಪಡೆದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆಯುಕ್ತರು, ಮೇ 23 ರವರೆಗೆ ಕಚೇರಿಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆದಾಗ್ಯೂ ಅಧಿಕಾರಿಗಳು ಮತ್ತು ಸಿಬ್ಬಂದಿ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚನೆ ನೀಡಿದ್ದಾರೆ.

    ಕರೊನಾಘಾತ : ಗಂಗಾನದಿಯಲ್ಲಿ ಹರಿದುಬಂದವು 40ಕ್ಕೂ ಹೆಚ್ಚು ಹೆಣಗಳು !

    ಬಂಗಾಳ ವಿಧಾನಸಭೆಯಲ್ಲಿ ಟಿಎಂಸಿ ವಿರುದ್ಧ ಮಾಜಿ ಟಿಎಂಸಿ !

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts