ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಸುಬ್ರಹ್ಮಣ್ಯ ಧಾರೇಶ್ವರರ ನುಡಿನಮನ

dhareshwar
ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಸುಬ್ರಹ್ಮಣ್ಯ ಧಾರೇಶ್ವರ ನುಡಿನಮನ ಕಾರ್ಯಕ್ರಮ ನಡೆಯಿತು
Published on

ಕೋಟ: ದಶಕ ದಶಕಗಳ ಕಾಲ ಒಂದು ಮೇಳವನ್ನು ಜವಾಬ್ದಾರಿಯುತವಾಗಿ ಮುನ್ನೆಡೆಸಿದ ಕೀರ್ತಿ ಕೀರ್ತಿಶೇಷ ಸುಬ್ರಹ್ಮಣ್ಯ ಧಾರೇಶ್ವರರದ್ದು. ಅದೂ ಹೊಸ ಪ್ರಸಂಗಗಳನ್ನು ಯಕ್ಷಗಾನ ಚೌಕಟ್ಟಿನಲ್ಲಿ ಯಶಸ್ವಿಯಾಗುವಲ್ಲಿ ಹೆಸರು ಪಡೆದ ಸಮರ್ಥ ರಂಗ ನಿರ್ದೇಶಕ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಹೇಳಿದರು.

ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಸುಬ್ರಹ್ಮಣ್ಯ ಧಾರೇಶ್ವರರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಲಾಕೇಂದ್ರ ಅಧ್ಯಕ್ಷ ಆನಂದ ಸಿ.ಕುಂದರ್ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾದ ತಲ್ಲೂರು ಶಿವರಾಮ ಶೆಟ್ಟಿ, ಕಲಾಪ್ರೋತ್ಸಾಕ ವೆಂಕಟೇಶ ಭಟ್ಟ, ಪ್ರಾಚಾರ್ಯ ಸದಾನಂದ ಐತಾಳ ಉಪಸ್ಥಿತರಿದ್ದರು. ಕಾರ್ಯದರ್ಶಿ ಐರೋಡಿ ರಾಜಶೇಖರ ಹೆಬ್ಬಾರ ಸ್ವಾಗತಿಸಿದರು. ರಾಮಚಂದ್ರ ಐತಾಳ ನಿರೂಪಿಸಿದರು. ಸೀತಾರಾಮ ಸೋಮಯಾಜಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net