More

    104 ಗ್ರಾಪಂಗಳಿಗೆ ನಾಮಪತ್ರ ಸಲ್ಲಿಕೆ ಇಂದಿನಿಂದ

    ಹಾವೇರಿ: ಜಿಲ್ಲೆಯಲ್ಲಿ ಗ್ರಾಪಂನ ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಡಿ. 7ರಿಂದ ಆರಂಭಗೊಳ್ಳಲಿದೆ. ರಾಣೆಬೆನ್ನೂರ, ಹಾವೇರಿ, ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ 104 ಗ್ರಾಪಂಗಳಿಗೆ ಮೊದಲ ಹಂತದಲ್ಲಿ ಡಿ. 22ರಂದು ಮತದಾನ ನಡೆಯಲಿದೆ.

    ರಾಜ್ಯ ಚುನಾವಣೆ ಆಯೋಗದ ಘೊಷಣೆಯಂತೆ ಜಿಲ್ಲೆಯಲ್ಲಿ 2 ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 4 ತಾಲೂಕುಗಳ 104, 2ನೇ ಹಂತದಲ್ಲಿ 105 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಮೊದಲ ಹಂತದ ಚುನಾವಣೆಗೆ ಸೋಮವಾರ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆಯೂ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಡಿ. 11 ಕೊನೆಯ ದಿನವಾಗಿದೆ. ಆಯಾ ಗ್ರಾಪಂಗಳಲ್ಲಿ ಚುನಾವಣೆ ಅಧಿಕಾರಿಗಳಿಗೆ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ನಾಮಪತ್ರ ಪರಿಶೀಲನೆ ಕಾರ್ಯ ಡಿ. 12ರಂದು ನಡೆಯಲಿದ್ದು, ಡಿ. 14 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಡಿ. 22ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಡಿ. 30ರಂದು ಬೆಳಗ್ಗೆ 8ಕ್ಕೆ ಆಯಾ ತಾಲೂಕು ಕೇಂದ್ರಗಳಲ್ಲಿ ಆರಂಭಗೊಳ್ಳಲಿದೆ.

    ನೀತಿ ಸಂಹಿತೆ: ಚುನಾವಣೆ ಜರುಗುವ ಎಲ್ಲ ಗ್ರಾಪಂಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಮಾತ್ರ ಡಿ. 31ರ ಸಂಜೆ 5 ಗಂಟೆವರೆಗೆ ನೀತಿ ಸಂಹಿತಿ ಜಾರಿಯಲ್ಲಿರುತ್ತದೆ. ಜಿಪಂ ಮತ್ತು ತಾಪಂ ಸಾಮಾನ್ಯ ಸಭೆ ನಡೆಸಬಹುದು. ಆದರೆ, ಸಭೆಯಲ್ಲಿ ಯಾವುದೇ ಹೊಸ ಯೋಜನೆಗಳ ಅನುಷ್ಠಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತಿಲ್ಲ. ಈಗಾಗಲೇ ಆಯವ್ಯಯದಲ್ಲಿ ಒದಗಿಸಿರುವ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಪ್ರಾರಂಭವಾಗಿದ್ದಲ್ಲಿ ಕೆಲಸ ಮುಂದುವರಿಸಲು ಅಡ್ಡಿಯಿಲ್ಲ. ಮಂತ್ರಿಗಳು ಅಥವಾ ಶಾಸಕರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಮತ್ತು ಇತರ ಸಭೆಗಳನ್ನು ನಡೆಸುವಂತಿಲ್ಲ. ನೆರೆಪೀಡಿತ ಹಾಗೂ ಪ್ರಕೃತಿ ವಿಕೋಪ ಪೀಡಿತ ಜನ ಸಮುದಾಯಕ್ಕೆ ನೀಡಲಾಗುವ ಯಾವುದೇ ಪರಿಹಾರ ಅಥವಾ ಸೌಲಭ್ಯಗಳಿಗೆ ನೀತಿ ಸಂಹಿತೆ ಅಡ್ಡಿಯಾಗುವುದಿಲ್ಲ. ಇಂತಹ ಯೋಜನೆಯ ಅನುಷ್ಠಾನವನ್ನು ಸಾರ್ವಜನಿಕ ಸಮಾರಂಭ ಅಥವಾ ರಾಜಕೀಯ ನಾಯಕರುಗಳ ಉಪಸ್ಥಿತಿಯಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ.

    ಸರ್ಕಾರಿ ವಾಹನಗಳನ್ನು ಚುನಾವಣೆ ಪ್ರಚಾರಕ್ಕೆ ಬಳಸುವಂತಿಲ್ಲ. ಗ್ರಾಪಂ ಚುನಾವಣೆಗಳು ಪಕ್ಷರಹಿತವಾಗಿ ನಡೆಯುವುದರಿಂದ ಅಭ್ಯರ್ಥಿಗಳು ಚುನಾವಣೆ ಪ್ರಚಾರ ಸಾಮಗ್ರಿಗಳಲ್ಲಿ ರಾಜಕೀಯ ಪಕ್ಷಗಳ ಚಿಹ್ನೆ ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಉಪಯೋಗಿಸಿ ಪ್ರಚಾರ ಮಾಡಕೂಡದು. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ವಿುಕ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನೀತಿ ಸಂಹಿತೆಯು ಅಡ್ಡಿಯಿಲ್ಲ. ಆದರೆ ಇಂತಹ ಸಭೆ-ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಿ ನೀತಿ ಸಂಹಿತೆಗೆ ಭಾದಕವಾಗುವ ರೀತಿಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಘೊಷಣೆ, ಹೇಳಿಕೆ ಅಥವಾ ಆಶ್ವಾಸನೆ ನೀಡುವಂತಿಲ್ಲ.

    ಕೋವಿಡ್ ನಿಯಮ ಅನ್ವಯ

    ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಅಭ್ಯರ್ಥಿ ಸೇರಿ 3 ಜನರಿಗೆ ಮಾತ್ರ ಅವಕಾಶವಿದೆ. ಪ್ರಚಾರಕ್ಕೆ ಅಭ್ಯರ್ಥಿ ಸೇರಿ 5 ಜನ ಮಾತ್ರ ಮನೆಮನೆಗೆ ತೆರಳಿ ಪ್ರಚಾರ ಮಾಡಬಹುದು. ಪರಸ್ಪರ ಅಂತರ ಹಾಗೂ ಮಾಸ್ಕ್ ಧರಿಸುವುದು ಕಡ್ಡಾಯ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts