

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಯಲ್ಲಿ ಒಂದಾಗಿರುವ ಶಕ್ತಿ ಯೋಜನೆಯಡಿ ಫ್ರೀ ಆಗಿ ಬಸ್ ಪ್ರಯಾಣ ಮಾಡುತ್ತಿರೋ ಮಹಿಳೆಯರು ಇದೀಗ ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂಪಾಯಿ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇಂದನಿಂದ ಅರ್ಜಿ ಸಲ್ಲಿಕೆಯೂ ಆರಂಭವಾಗಲಿದೆ.
ಕಾಂಗ್ರೆಸ್ ಗ್ಯಾರಂಟಿಗಳ ಪೈಕಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಿಕ ಹಣ ನೀಡುವ ಗೃಹಲಕ್ಷ್ಮಿ ಯೋಜನೆಯೂ ಒಂದು. ಅತ್ತೆ ಅಥವಾ ಸೊಸೆ ಸೇರಿದಂತೆ ಮನೆಯ ಓರ್ವ ಯಜಮಾನಿಗೆ 2000 ರೂಪಾಯಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನಿಂದ (ಜೂನ್ 27) ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ತೆಗೆ 2 ಸಾವಿರ ರೂ ಹಣ ಜಮಾ ಮಾಡಲಾಗುತ್ತದೆ ಎಂದು ಈಗಾಗಲೇ ಸಚಿವೆ ಲಕ್ಷ್ಮೀ ಹೆಬ್ಬಾಳ ತಿಳಿಸಿದ್ದಾರೆ.
ಜೂನ್ 27ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಮುಖ್ಯಮಂತ್ರಿಗಳಿಗೆ ಆಯಪ್ ತೋರಿಸಿ ವಿವರಿಸುತ್ತೇವೆ. ನಂತರ ಅರ್ಜಿ ಸಲ್ಲಿಕೆಗೆ ಆ್ಯಪ್ ಬಿಡುಗಡೆ ಮಾಡಲಾಗುವುದು. ಆಗಸ್ಟ್ 17ರ ನಂತರ ಫಲಾನುಭವಿಗಳ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ, ಶುಲ್ಕವೂ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಲಾಗಿದ್ದು, ಇದರ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಸಲ್ಲಿಸುವುದು ಎಲ್ಲಿ?: ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್ನಲ್ಲಿ ಆನ್ನೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಾಗಿ ಪ್ರತ್ಯೇಕ ಪೋರ್ಟಲ್ ಸಿದ್ಧಪಡಿಸಲಾಗಿದೆ.
ಬೇಕಾಗುವ ದಾಖಲೆಗಳು: