More

    ಗ್ಯಾನವಾಪಿ ಮಸೀದಿ ಸಮೀಕ್ಷಾ ವರದಿ ಬಹಿರಂಗಪಡಿಸದಿರಲು ಕೋರ್ಟ್ ತಾಕೀತು!

    ವಾರಾಣಸಿ: ಕಾಶಿ ವಿಶ್ವನಾಥ ಮಂದಿರಕ್ಕೆ ಹೊಂದಿಕೊಂಡಿರುವ ಗ್ಯಾನವಾಪಿ ಮಸೀದಿ ಸಂಕೀರ್ಣದಲ್ಲಿನ ‘ಹಿಂದು ಕುರುಹು’ಗಳ ಅಧ್ಯಯನ ಮಾಡಿರುವ ಎಎಸ್‌ಐ ಸಮೀಕ್ಷಾ ವರದಿಯನ್ನು ಉಭಯ ಅರ್ಜಿದಾರರಿಗೆ ನೀಡಲಾಗುವುದು. ಆದರೆ ವರದಿಯನ್ನು ಬಹಿರಂಗಪಡಿಸಬಾರದು ಎಂದು ಸ್ಥಳೀಯ ನ್ಯಾಯಾಲಯ ತಾಕೀತು ಮಾಡಿದೆ.

    ಇದನ್ನೂ ಓದಿ: ಹಿಂಡೆನ್‌ಬರ್ಗ್‌ ಕೇಸಲ್ಲಿ ‘ಸುಪ್ರೀಂ’ ರಿಲೀಫ್‌: ಸತ್ಯ ಜಯಿಸಿದೆ ಎಂದ ಅದಾನಿ

    ಹಿಂದು ಮತ್ತು ಮುಸ್ಲಿಂ ಎರಡೂ ಬಣಗಳು ವರದಿಯನ್ನು ತಮ್ಮ ಬಳಿ ಇಟ್ಟುಕೊಳ್ಳಬಹುದು. ಆದರೆ ಅದನ್ನು ಸಾರ್ವಜನಿಕಗೊಳಿಸಬಾರದು ಎಂದು ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಆದೇಶಿಸಿದರು.ಈ ಬಗ್ಗೆ ಅಫಿಡವಿಟ್ ನೀಡಬೇಕು ಎಂದು ಆದೇಶಿಸಿದೆ.
    ಕೇವಲ ಅಧ್ಯಯನ ಉದ್ದೇಶಕ್ಕೆ ಮಾತ್ರ ವರದಿ ನೀಡಲಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಯನ್ನು ಹಿಂದು ದೇವಾಲಯ ಕೆಡವಿ ನಿರ್ಮಿಸಲಾಗಿದೆ ಎಂದು ಹಿಂದು ಪರ ದಾವೆದಾರರು ಅರ್ಜಿ ಹಾಕಿದ್ದರು. ಹೀಗಾಗಿ ಇದು ನಿಜವೇ ಎಂದು ಅರಿಯಲು ಜಿಲ್ಲಾ ಕೋರ್ಟ್​ ಎಎಸ್‌ಐ (ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ) ಸಮೀಕ್ಷೆಗೆ ಆದೇಶಿಸಿತ್ತು.

    ಭಾರತಕ್ಕೆ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ : ಪ್ರಧಾನಿ ಮೋದಿ ಅವರೊಂದಿಗೆ ವಿಶೇಷ ಕಾರ್ಯಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts