More

    ಉದ್ಯೋಗ ಖಾತ್ರಿ ಅವ್ಯವಹಾರ ಸಿಐಡಿ ತನಿಖೆಗೆ ಒಪ್ಪಿಸಿ

    ರಾಯಚೂರು: ದೇವದುರ್ಗ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಅವ್ಯವಹಾರದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಸಿಪಿಐಎಂನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
    ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಉದ್ಯೋಗ ಖಾತ್ರಿ ಯೋಜನೆಯ ಕೆಲಸದ ದಿನಗಳನ್ನು 200ಕ್ಕೆ ದಿನಕ್ಕೆ ಹೆಚ್ಚಿಸಬೇಕು. ಕೂಲಿ ದರವನ್ನು 600 ರೂ. ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.
    ಉದ್ಯೋಗ ಖಾತ್ರಿ ಯೋಜನೆಯಡಿ ನಿಯಮ ಉಲ್ಲಂಸಿ ಅಸ್ತಿತ್ವದಲ್ಲಿ ಇಲ್ಲದೇ ಇರುವ ಗುತ್ತಿಗೆದಾರನಿಗೆ ಸಾಮಗ್ರಿ ವೆಚ್ಚಕ್ಕೆ 100 ಕೋಟಿ ರೂ.ಗೂ ಹೆಚ್ಚು ಹಣವನ್ನು ನೀಡಲಾಗಿದೆ. ಅವ್ಯವಹಾರದಲ್ಲಿ ಭಾಗಿಯಾಗಿರುವ ಎಲ್ಲ ಹಂತದ ಅಕಾರಿಗಳನ್ನು ಬಂತಿ ತನಿಖೆಗೆ ಒಳಪಡಿಸಬೇಕು.
    ದೇವದುರ್ಗ ತಾಲೂಕಿನ 33 ಗ್ರಾ.ಪಂ.ಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳಾದ ವಸತಿ, ಕುಡಿಯುವ ನೀರು ಸೇರಿದಂತೆ ವಿವಿಧ ಮೂಲ ಸೌಕರ್ಯಗಳನ್ನು ಒದಗಿಸಲು ಅಕಾರಿಗಳು ತಡೆ ಹಾಕಿದ್ದಾರೆ. ಬರಗಾಲದ ಸಂದರ್ಭದಲ್ಲಿ ತಕ್ಷಣವೇ ಅಭಿವೃದ್ಧಿ ಕೆಲಸಗಳಿಗೆ ಮುಕ್ತ ಅವಕಾಶ ಕೊಟ್ಟು ಸಕಾಲದಲ್ಲಿ ಮುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಪಧಾದಿಕಾರಿಗಳಾದ ನರಸಣ್ಣ ನಾಯಕ, ಶಬ್ಬೀರ್, ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೊಳ್ಳಿ, ಸಂಗಮೇಶ, ವೌನೇಶ ಸಾಗರ್, ಮಹಾಲಿಂಗ ದೊಡ್ಡಮನಿ, ಜೆ.ಹನುಮಂತ, ಹನುಮಂತ ಗುರಿಕಾರ, ಬಸವರಾಜ, ಸರೋಜಮ್ಮ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts