More

    ನೀವು ಆಟೋ, ಟ್ಯಾಕ್ಸಿ ಚಾಲಕರಾ? ಕರೊನಾ ಪರಿಹಾರ ಧನಕ್ಕೆ ಅರ್ಜಿಯನ್ನು ಹೀಗೆ ಸಲ್ಲಿಸಿ…

    ಬೆಂಗಳೂರು: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ರಾಜ್ಯ ಸರ್ಕಾರ ತಲಾ 5 ಸಾವಿರ ರೂ. ಪರಿಹಾರ ಧನವನ್ನು ಈಗಾಗಲೇ ಘೋಷಿಸಿದೆ.

    ಆದರೆ ಈ ಪರಿಹಾರ ಹಣವನ್ನು ಹೇಗೆ ಪಡೆಯಬೇಕು ಎಂಬ ಬಗ್ಗೆ ಬಹಳಷ್ಟು ಚಾಲಕರಲ್ಲಿ ಗೊಂದಲ ಮನೆ ಮಾಡಿದೆ. ಅಷ್ಟೇ ಅಲ್ಲ, ಕೆಲವು ಚಾಲಕರು ಬ್ಯಾಂಕು, ಅಂಚೆ ಕಚೇರಿ ಹೀಗೆ ಎಲ್ಲೆಂದರಲ್ಲಿ ಸಾಲುಗಟ್ಟಿ ನಿಲ್ಲುತ್ತಿರುವುದು ಕಂಡುಬಂದಿದೆ.

    ಇದನ್ನೂ ಓದಿ ಸಂಕಷ್ಟದಲ್ಲಿರುವ ವಕೀಲರಿಗೆ ಆರ್ಥಿಕ ನೆರವು: ರಾಜ್ಯ ಹೈಕೋರ್ಟ್ ಸೂಚನೆ

    ಪರಿಹಾರ ಧನ ಪಡೆಯಲು ಸಾರಿಗೆ ಸಚಿವರಿಗೆ ನೇರವಾಗಿ ಅರ್ಜಿ ಕಳುಹಿಸಬೇಕು ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಶುಕ್ರವಾರ ಕೆಲವು ಚಾಲಕರು, ಅರ್ಜಿ ಬರೆದು ಅಂಚೆ ಕಚೇರಿಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.

    ಇದು ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪರಿಹಾರ ಧನಕ್ಕಾಗಿ ಅರ್ಜಿ ಲಿಖಿತ ರೂಪದಲ್ಲಿ ಸಲ್ಲಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಜತೆಗೆ ಸ್ಪಷ್ಟ ಮಾಹಿತಿಯನ್ನೂ ಬಿಡುಗಡೆ ಮಾಡಿದೆ.

    ಎಲ್ಲ ಚಾಲಕರು ‘ಸೇವಾಸಿಂಧು’ ವೆಬ್‌ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಚಾಲಕರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದೆ ಎಂದು ಸಾರಿಗೆ ಇಲಾಖೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
    ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಲ್ಲದೆ ಬೇರೆ ಯಾವ ರೀತಿಯಲ್ಲೂ ಅರ್ಜಿ ಸ್ವೀಕರಿಸುವುದಿಲ್ಲ ಎಂದೂ ತಿಳಿಸಿದೆ.

    ಮುಂದುವರೆದಿದೆ ಕರೊನಾ ಅಟ್ಟಹಾಸ: ಶೇ.50ರಷ್ಟು ಮಂದಿ ಬಿಡುಗಡೆಯಾಗಿದ್ದೇ ಸಮಾಧಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts