More

    ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ಬಂಧನ

    ಸುಬ್ರಹ್ಮಣ್ಯ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ಸುಬ್ರಹ್ಮಣ್ಯದ ಸ್ಥಳೀಯ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ಶಿಕ್ಷಕ ರಾಯಚೂರು ಮೂಲದ ಗುರುರಾಜ್ ಎಂಬಾತನನ್ನು ಸುಬ್ರಹ್ಮಣ್ಯ ಪೋಲೀಸರು ಭಾನುವಾರ ಬಂಧಿಸಿದ್ದಾರೆ.

    ಶಿಕ್ಷಕ ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ. ಅಲ್ಲದೆ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮೊಬೈಲ್ ಮೂಲಕ ಫೋಟೋ ತೆಗೆದು ಅದನ್ನು ತೋರಿಸಿ ಮನೆಯಿಂದ ಹಣ ತರುವಂತೆ ಬೆದರಿಸುತ್ತಿದ್ದ. ಇದಕ್ಕೆ ಆತನ ಪತ್ನಿ ಕೂಡ ಸಾಥ್ ನೀಡುತ್ತಿದ್ದಳು ಎಂದು ವಿದ್ಯಾರ್ಥಿನಿಯ ತಾಯಿ ಠಾಣೆಗೆ ದೂರು ನೀಡಿದ್ದರು.

    ದೂರಿನ ಹಿನ್ನೆಲೆಯಲ್ಲಿ ಆರೋಪಿ ಶಿಕ್ಷಕ ಗುರುರಾಜ್‌ನ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ತನಿಖೆ ನಡೆಸಿದ್ದಾರೆ. ಬಳಿಕ ಪುತ್ತೂರು ಮ್ಯಾಜಿಸ್ಟ್ರೇಟ್‌ಗೆ ಒಪ್ಪಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts