More

    ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ: ಶಾಸಕ ಎಸ್.ಅಂಗಾರ

    ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಈಗಿರುವ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಶಾಸಕ ಎಸ್.ಅಂಗಾರ ಹೇಳಿದರು.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ದೇವಳದ ಜಾಗದಲ್ಲಿ ನಿರ್ಮಾಣಗೊಳ್ಳಲಿರುವ ಆರೋಗ್ಯ ಉಪಕೇಂದ್ರ ಕಟ್ಟಡಕ್ಕೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

    ಜಿಪಂ ಸದಸ್ಯೆ ಆಶಾ ತಿಮ್ಮಪ್ಪ, ತಾಪಂ ಸದಸ್ಯ ಅಶೋಕ್ ನೆಕ್ರಾಜೆ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಕುಕ್ಕೆ ದೇವಳ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ, ಅಭಿವೃದ್ಧಿ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್.ಪ್ರಸಾದ್, ಮನೋಹರ ರೈ, ವನಜಾ ವಿ.ಭಟ್, ಸ್ಥಳೀಯರಾದ ದಿನೇಶ್ ಸಂಪ್ಯಾಡಿ, ಚಿದಾನಂದ ಕಂದಡ್ಕ, ರವಿ ಕಕ್ಕೆಪದವು, ರಾಜೇಶ್ ಎನ್.ಎಸ್., ಪ್ರಸಾದ್ ಕೆ.ರೈ, ಶ್ರೀಕುಮಾರ್ ಬಿಲದ್ವಾರ, ಪ್ರಶಾಂತ್ ಭಟ್ ಮಾಣಿಲ, ಅಚ್ಚುತ್ತ ಗೌಡ, ರಾಜೇಶ್ ಕಾಶಿಕಟ್ಟೆ, ಅಶೋಕ್ ಆಚಾರ್ಯ, ಆರೋಗ್ಯ ಸಹಾಯಕಿ ಹೇಮಾ ಕರುಣಾಕರ್, ಗ್ರಾಪಂ ನೂತನ ಸದಸ್ಯರಾದ ಸವಿತಾ ಭಟ್, ಭಾರತಿ ದಿನೇಶ್, ದಿವ್ಯಾ ಯಶೋದಾಕೃಷ್ಣ, ವೆಂಕಟೇಶ್ ಎಚ್.ಎಲ್., ನಾರಾಯಣ ಅಗ್ರಹಾರ ಮತ್ತಿತರರು ಉಪಸ್ಥಿತರಿದ್ದರು.

    ಕಡಬ ಆರೋಗ್ಯ ಕೇಂದ್ರವನ್ನು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಬೇಕು ಮತ್ತು ನೂತನ ಕಡಬ ತಾಲೂಕಿಗೆ ಮೂಲಸೌಕರ್ಯಗಳನ್ನು ಒದಗಿಸಲು ಅನುದಾನ ಮಂಜೂರು ಮಾಡಬೇಕು ಎಂದು ವಿನಂತಿಸಲಾಗಿತ್ತು. ಸೂಕ್ತವಾಗಿ ಸ್ಪಂದಿಸಿದ ಆರೋಗ್ಯ ಸಚಿವರು ಶೀಘ್ರ ಅನುದಾನ ಬಿಡುಗಡೆಗೊಳಿಸುವ ಭರವಸೆ ನೀಡಿದ್ದಾರೆ.
    |ಎಸ್.ಅಂಗಾರ ಶಾಸಕ 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts