ಹೈನುಗಾರಿಕೆಯಿಂದ ಯಶಸ್ಸು ಗಳಿಕೆ

hainugarike
ತಾಲೂಕುಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಿದರು.
Published on

ಕುಂದಾಪುರ: ಹೈನುಗಾರಿಕೆಯನ್ನು ವೈಜ್ಞಾನಿಕ ರೀತಿಯಲ್ಲಿ ಮಾಡುವುದರಿಂದ ಯಶಸ್ಸು ಗಳಿಸಲು ಸಾಧ್ಯ. ಪಶುಪಾಲನಾ ಇಲಾಖೆಯಲ್ಲಿ ಪಶುವೈದ್ಯರ ಕೊರತೆಯಿದ್ದು, ಪ್ರತಿ 4000 ಜಾನುವಾರುಗಳಿಗೆ ಓರ್ವ ಪಶು ವೈದ್ಯರನ್ನು ನೇಮಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಉಡುಪಿ ಜಿಪಂ, ಪಶು ಸಂಗೋಪನಾ ಇಲಾಖೆ, ಕುಂದಾಪುರ ತಾಲೂಕು ಪಂಚಾಯಿತಿ, ಹಕ್ಲಾಡಿ ಗ್ರಾಮ ಪಂಚಾಯಿತಿ, ಮಂಗಳೂರು ದ.ಕ. ಹಾಲು ಉತ್ಪಾದಕರ ಒಕ್ಕೂಟ, ಬಗ್ವಾಡಿ, ಕಟ್‌ಬೇಲ್ತೂರು, ನೂಜಾಡಿ, ಕುಂದಬಾರಂದಾಡಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ ಬಗ್ವಾಡಿ ಶ್ರೀ ಮಹಿಷಮರ್ದಿನಿ ದೇವಸ್ಥಾನ ವಠಾರದಲ್ಲಿ ಸೋಮವಾರ ತಾಲೂಕುಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ಉಡುಪಿ ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಎಂ.ಸಿ.ರೆಡ್ಡಪ್ಪ ಅಧ್ಯಕ್ಷತೆ ವಹಿಸಿದ್ದರು. ದ.ಕ. ಹಾಲು ಉತ್ಪಾದಕರ ಒಕ್ಕೂಟ ನಿರ್ದೇಶಕ ಪ್ರಕಾಶ್ಚಂದ್ರ ಶೆಟ್ಟಿ, ಕುಂದಾಪುರ ತಾಲೂಕು ಕೆಡಿಪಿ ಸಮಿತಿ ಸದಸ್ಯ ಶರತ್ ಕುಮಾರ್ ಶೆಟ್ಟಿ, ಹಾಲು ಉತ್ಪಾದಕರ ಒಕ್ಕೂಟ ಕುಂದಾಪುರ ವಿಭಾಗ ಉಪ ವ್ಯವಸ್ಥಾಪಕ ಶಂಕರ ನಾಯ್ಕ, ಬಗ್ವಾಡಿ, ಕುಂದಬಾರಂದಾಡಿ, ನೂಜಾಡಿ, ಕಟ್‌ಬೇಲ್ತೂರು ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷರು ಉಪಸ್ಥಿತರಿದ್ದರು. ಹೆಮ್ಮಾಡಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ.ಅರುಣ್ ಕೆ.ಪಿ. ಸ್ವಾಗತಿಸಿದರು. ಕುಂದಾಪುರ ಪಶು ಸಂಗೋಪನಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಾಬಣ್ಣ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಹಾಲು ಉತ್ಪಾದಕರ ಒಕ್ಕೂಟದ ಕುಂದಾಪುರ ವಿಭಾಗ ವಿಸ್ತರಣಾಧಿಕಾರಿ ವಾಸು ಪುರಾಣಿಕ್ ಕಾರ್ಯಕ್ರಮ ನಿರೂಪಿಸಿದರು. ಹುಣ್ಸೆಮಕ್ಕಿ ಪಶು ಚಿಕಿತ್ಸಾಲಯದ ಪಶು ವೈದ್ಯಾಧಿಕಾರಿ ಡಾ.ಜಯಣ್ಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net