ಚಿಕ್ಕಮಗಳೂರು: ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಶ್ರೇಷ್ಠ ಸ್ಥಾನವಿದೆ. ಗುರುಗಳು ಜೀವನದ ಕತ್ತಲನ್ನು ದೂರಮಾಡಿ ಬೆಳಕಿನೆಡೆಗೆ ಸಾಗಲು ಉತ್ತಮ ಮಾರ್ಗದರ್ಶನ ನೀಡುತ್ತಾರೆ ಎಂದು ಶಾರದ ಪೈ ಕಲ್ಯಾಣ ಮಂಟಪದ ಟ್ರಸ್ಟ್ನ ಅಧ್ಯಕ್ಷ ಜಯಂತ್ ಪೈ ಪ್ರಭು ತಿಳಿಸಿದರು.
ಶಾರದ ಪೈ ಕಲ್ಯಾಣ ಮಂಟಪದಲ್ಲಿ ಕಾಶಿ ಮಠದ ವಾರಣಾಸಿ ಅದೀನ ಸಂಸ್ಥೆಯಿAದ ಭಾನುವಾರ ಆಯೋಜಿಸಲಾಗಿದ್ದ ಗುರುಪೂರ್ಣಿಮ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದ ಅವರು, ಗುರುವನ್ನು ಅರಿವಿನ ಸಾಗರ ಎಂದು ಕರೆಯುತ್ತಾರೆ. ಸರ್ವರ ಹಿತ ಬಯಸುವ ಗುರುಗಳನ್ನು ಭಕ್ತಿ ಕೃತಜ್ಞತೆಯಿಂದ ಸ್ಮರಿಸಿ ಪೂಜಿಸುವ ಕಾರ್ಯಕ್ರಮವೇ ಗುರುಪೂರ್ಣಿಮೆ ಆಗಿದೆ ಎಂದರು.
ವಿದ್ಯಾರ್ಥಿಗಳು ಗುರುಗಳ ಮತ್ತು ಪಾಲಕರ ಮಾರ್ಗದರ್ಶನದಲ್ಲಿ ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕು. ಉನ್ನತ ವ್ಯಾಸಂಗ ಮಾಡಿ ಸಮಾಜ ಸೇವೆ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಇತರರಿಗೆ ಮಾದರಿಯಾಗಿ ಸಾರ್ಥಕ ಬದುಕನ ನಿಮ್ಮದಾಗಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಟ್ರಸ್ಟ್ ವ್ಯವಸ್ಥಾಪಕ ಲಕ್ಷö್ಮಣ್ ಕಾಮತ್, ಪ್ರಮುಖರಾದ ನಾರಾಯಣ ಮಲ್ಯ, ಕೃಷ್ಣಭಟ್ ಉಪಸ್ಥಿತರಿದ್ದರು.