ಶ್ರದ್ಧೆ, ಭಕ್ತಿಯ ಕಾರ್ಯಕ್ಕೆ ಯಶಸ್ಸು ಶತಸ್ಸಿದ್ಧ

pdb
Published on

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಶ್ರದ್ಧೆ ಮತ್ತು ಭಕ್ತಿಯಿಂದ ಮಾಡಿದ ಕಾರ್ಯ ಯಶಸ್ವಿಯಾಗುತ್ತದೆ. ಅಹಂಕಾರವಿಲ್ಲದೆ ನಡೆದ ಕಾರ್ಯದಿಂದ ಭಕ್ತರು ಕ್ಷೇತ್ರವನ್ನು ಬೆಳೆಗಿಸುತ್ತಾರೆ. ಇದರಿಂದ ಧಾರ್ಮಿಕ ಕ್ಷೇತ್ರಗಳು ಬೆಳೆಯುತ್ತವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಉಚ್ಚಂಗಿ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದರು.

ದೇವಳ, ಜನಜಾಗೃತಿ ವೇದಿಕೆ ಹಾಗೂ ಪ್ರಗತಿಬಂಧು ಒಕ್ಕೂಟ ವತಿಯಿಂದ ಡಾ.ಹೆಗ್ಗಡೆ ಅವರನ್ನು ಗೌರವಿಸಲಾಯಿತು. ಅಂತಾರಾಷ್ಟ್ರೀಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ ಮಲ್ಲಾರು, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಸ್ವರ್ಣಗದ್ದುಗೆ ಸಮರ್ಪಣಾ ಸಮಿತಿ ಅಧ್ಯಕ್ಷ ದಿವಾಕರ್ ಶೆಟ್ಟಿ ಕಾಪು, ವಕೀಲ ಮಹೇಶ್ ಕೋಟ್ಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ಶೆಟ್ಟಿ, ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಅನಿಲ್ ಬಲ್ಲಾಳ್, ಉಪಾಧ್ಯಕ್ಷ ಮಾಧವ ಆರ್ ಪಾಲನ್, ಕೆ.ವಿಶ್ವನಾಥ್, ಹರಿಯಪ್ಪ ಕೋಟ್ಯಾನ್ ಉಪಸ್ಥಿತರಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸ್ವಾಗತಿಸಿದರು. ದಾಮೋದರ ಶರ್ಮ, ಅಶೋಕ್ ಪಕಳ ಕಾರ್ಯಕ್ರಮ  ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net