More

    ಪರೀಕ್ಷೆಗೆ ಅಗತ್ಯ ತಯಾರಿ ನಡೆಸಿದರೆ ಯಶಸ್ಸು ಸಾಧ್ಯ


    ಮೇಲುಕೋಟೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಹಬ್ಬದಂತೆ ಭಾವಿಸಿ ಸಂಭ್ರಮಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಯಾರಿ ಮಾಡಿದರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದು ಅಂತಾರಾಷ್ಟ್ರೀಯ ತರಬೇತುದಾರ ಚೇತನ್‌ರಾಮ್ ಕಿವಿಮಾತು ಹೇಳಿದರು.

    ಮೇಲುಕೋಟೆ ಹೋಬಳಿಯ ಜಕ್ಕನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಹಯೋಗದಲ್ಲಿ ಮೇಲುಕೋಟೆ ಹೋಬಳಿಯ ಸರ್ಕಾರಿ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಯ ಸಂಬಂಧ ಬುಧವಾರ ಹಮ್ಮಿಕೊಂಡಿದ್ದ ‘ಪರೀಕ್ಷೆ ಒಂದು ಹಬ್ಬ ಸಂಭ್ರಮಿಸಿ’ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆಯ ವೇಳೆ ಸಮಯಕ್ಕೆ ಮಹತ್ವ ನೀಡಬೇಕು. ವಿಷಯಗಳಿಗೆ ಸಮಯ ನಿಗದಿ ಮಾಡಿಕೊಂಡು ಅಭ್ಯಾಸ ನಡೆಸಬೇಕು. ಯಾವ ಪ್ರಶ್ನೆಗೆ ಎಷ್ಟು ಉತ್ತರ ಬರೆಯಬೇಕು ಎಂಬುದನ್ನು ತಿಳಿದುಕೊಂಡಿರಬೇಕು. ಪರೀಕ್ಷೆಯ ಬಗ್ಗೆ ಭಯ, ಆತಂಕ ಬಿಟ್ಟು ಹಬ್ಬದ ರೀತಿಯಲ್ಲಿ ಸಂಭ್ರಮಿಸಿ ಕಲಿಕೆಗೆ ಅಕ್ಷರ ರೂಪ ನೀಡಬೇಕು. ಹೀಗಾದಾಗ ಹೆಚ್ಚಿನ ಅಂಕ ಗಳಿಸಲು ಸಾಧ್ಯವಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪಾಂಡವಪುರ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಸಿದ್ಧತೆಗಾಗಿ ಇನ್ನೂ 68 ದಿನಗಳ ಕಾಲಾವಕಾಶ ದೊರೆಯಲಿದೆ. ಉತ್ತಮ ರೀತಿಯಲ್ಲಿ ಅಭ್ಯಾಸ ನಡೆಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಬೇಕು ಎಂದರು

    ತಾಲೂಕು ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಅನಿತಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಅಮೃತಿ ಶಂಕರ್, ದೇವರಹಳ್ಳಿ ಕೃಷ್ಣೇಗೌಡ ತಾ.ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಎಂ.ರಮೇಶ್, ತಾಲೂಕು ಸಹಶಿಕ್ಷಕರ ಸಂಘದ ಅಧ್ಯಕ್ಷ ಕೇಶವ್ ಮೂರ್ತಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಹದೇಶ್, ಶಿಕ್ಷಣ ಸಂಯೋಜಕರಾದ ರಮೇಶ್, ಶ್ರೀನಿವಾಸ್, ಜಕ್ಕನಹಳ್ಳಿ ಪ್ರೌಢಶಾಲೆ ಮುಖ್ಯಶಿಕ್ಷಕ ಕೆಂಪರಾಜ್, ಮೂಡಲ ಕೊಪ್ಪಲು ನಿಂಗರಾಜು, ಪುಟ್ಟೇಗೌಡ ಉಳಿಗೆರೆ, ಪ್ರಾಂಶುಪಾಲ ಮೋಹನಕುಮಾರ್, ಸಹ ಶಿಕ್ಷಕ ಎಂ.ಬಿ. ಉಗ್ರೇಗೌಡ ಹಾಗೂ ಮುಖ್ಯಶಿಕ್ಷಕರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts