More

    ಶ್ರದ್ಧೆಯಿಂದ ಶ್ರಮಪಟ್ಟರೆ ಯಶಸ್ಸು ಸಾಧ್ಯ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಾಘವೇಂದ್ರ

    ಮೈಸೂರು: ವಿದ್ಯಾರ್ಥಿಗಳು ಗುರಿ ಇಟ್ಟುಕೊಂಡು ಶ್ರದ್ಧೆಯಿಂದ ಶ್ರಮಪಟ್ಟರೆ ಸಾಧನೆಯ ಮೆಟ್ಟಿಲೇರಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ರಾಘವೇಂದ್ರ ಹೇಳಿದರು.
    ಕುವೆಂಪುನಗರದಲ್ಲಿರುವ ಡಿ.ದೇವರಾಜು ಅರಸು ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ನಡೆದ 2023-24ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
    ಸರ್ಕಾರಿ ಶಾಲೆಯಲ್ಲಿ ಓದಿದವರು, ಬಿಸಿಎಂ ವಿದ್ಯಾರ್ಥಿನಿಲಯಗಳಲ್ಲಿ ವ್ಯಾಸಂಗ ಮಾಡಿದವರು ಸರ್ಕಾರದ ಉನ್ನತ ಹುದ್ದೆಗಳಲ್ಲಿದ್ದಾರೆ. ಅಲ್ಲದೇ ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾಗಿದ್ದರೂ ವಿದ್ಯಾರ್ಥಿನಿಲಯ ಸೇರಿ ಮುಂದೆ ಚನ್ನಾಗಿ ಓದಿ ಎತ್ತರದ ಸ್ಥಾನಕ್ಕೆ ಏರಿರುವ ಉದಾಹರಣೆಗಳು ಸಾಕಷ್ಟು ಇವೆ ಎಂದು ತಿಳಿಸಿದರು.
    ಬಿಸಿಎಂ ಹಾಸ್ಟೆಲ್‌ಗೆ ಬರುವ ವಿದ್ಯಾರ್ಥಿಗಳೆಲ್ಲಾ ಸಾಮಾನ್ಯವಾಗಿ ಗ್ರಾಮೀಣ ಭಾಗದಿಂದ ಬರುವವರಾಗಿದ್ದು, ಬಡವರಾಗಿರುತ್ತಾರೆ. ನಿಮ್ಮ ತಂದೆ, ತಾಯಿ ಕಷ್ಟಪಟ್ಟು ನಿಮ್ಮನ್ನು ಓದಿಸಿದ್ದಾರೆ. ನಿಮ್ಮ ಮೇಲೆ ಅಪಾರ ವಿಶ್ವಾಸವಿಟ್ಟುಕೊಂಡಿದ್ದಾರೆ. ಆ ವಿಶ್ವಾಸಕ್ಕೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳಿ. ಪದವಿ ಮುಗಿದ ನಂತರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಂಡು ಉನ್ನತ ಹುದ್ದೆಗಳನ್ನು ಅಲಂಕರಿಸಿ ಎಂದು ಸಲಹೆ ನೀಡಿದರು.
    ವಿವಿಧ ನಿಲಯಪಾಲಕರಾದ ಜಗದೀಶ್‌ಕೋರಿ, ಪರಶುರಾಂ, ಯಶವಂತ್, ನಾಗರಾಜ್, ನಾಗರತ್ನ, ರಮ್ಯಾ, ತೇಜಸ್ವಿನಿ, ಯಶೋಧ, ಪರಮೇಶ್ವರಪ್ಪ, ಭಾಗ್ಯಲಕ್ಷ್ಮೀ, ವಸಂತ ಇತರರು ಇದ್ದರು. ಇದೇ ವೇಳೆ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts