

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಕುತ್ತಿಗೆ ಸಿಟಿ ಸ್ಕಾೃನ್ ವರದಿ ಪರಿಶೀಲಿಸಿದಾಗ ಕ್ಯಾನ್ಸರ್ ಗಡ್ಡೆಗಳು ಕುತ್ತಿಗೆಗೂ ಹರಡಿದ್ದು, ಬಲಭಾಗದಲ್ಲಿ ಕುತ್ತಿಗೆ ಪ್ರಮುಖ ನಾಳಗಳನ್ನು ಸುತ್ತುವರಿದು, ಸಂಕುಚಿತಗೊಳಿಸಿರುವುದು ಕಂಡು ಬಂದಿತ್ತು. ಶಸ್ತ್ರಚಿಕಿತ್ಸೆಯ ಅಗತ್ಯತೆ ಮತ್ತು ಮುಂದಿನ ಚಿಕಿತ್ಸೆ ಬಗ್ಗೆ ರೋಗಿ ಮತ್ತು ಸಂಬಂಧಿಕರಿಗೆ ತಿಳಿಸಲಾಯಿತು. ನಾಳಗಳಿಗೆ ಹಾನಿಯಾಗದಂತೆ ಗಡ್ಡೆ ತೆಗೆಯುವುದು ವೈದ್ಯರಿಗೆ ದೊಡ್ಡ ಸವಾಲು ಆಗಿತ್ತು. ಬಲಭಾಗದ ಹೆಮಿಗ್ಲೋಸೆಕ್ಟಮಿ (ನಾಲಿಗೆಯ ಬಲಭಾಗದ ಅರ್ಧವನ್ನು ತೆಗೆಯುವುದು) ಜೊತೆಗೆ ಬಲಭಾಗದಲ್ಲಿ ಕುತ್ತಿಗೆಗೆ ಛೇದನ ಮಾಡಿ ಕುತ್ತಿಗೆಗೆ ಕ್ಯಾನ್ಸರ್ ಹರಡದಂತೆ ದುಗ್ದರಸ ಗ್ರಂಥಿಗಳನ್ನು ತೆಗೆಯುವ ಶಸ್ತ್ರಚಿಕಿತ್ಸೆ ನಡೆಸಲಾಯಿತು.ಯಾವುದೇ ತೊಡಕುಗಳು ಇಲ್ಲದಂತೆ ನಾಳಗಳಿಗೆ ಹಾನಿಯಾಗದಂತೆ 7ಗಂಟೆಗಳ ಶಸ್ತ್ರಚಿಕಿತ್ಸೆಯಲ್ಲಿ ಯಶಸ್ವಿಯಾಗಿ ಗೆಡ್ಡೆ ಹೊರತೆಗೆದು ಪ್ಲಾಸ್ಟಿಕ್ ಸರ್ಜರಿ ನಡೆಸಲಾಯಿತು. ತಲೆ ಮತ್ತು ಕುತ್ತಿಗೆ ಆಂಕೊಸರ್ಜನ್, ಕಿವಿ-ಮೂಗು-ಗಂಟಲು ತಜ್ಞ ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಡಾ.ರೋಹನ್ ದೀಕ್ಷಿತ್, ಪ್ಲಾಸ್ಟಿಕ್ ಮತ್ತು ಪುನರ್ ನಿರ್ಮಾಣ ಶಸ್ತ್ರಚಿಕಿತ್ಸಕ ಡಾ.ಕೃಷ್ಣ ಪ್ರಸಾದ್ ಶೆಟ್ಟಿ ಹಾಗೂ ಅರೆವಳಿಕೆ ತಜ್ಞ ಡಾ.ಸುಪ್ರೀತ್‌ಆರ್.ಶೆಟ್ಟಿ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದರು. ರೋಗಿಯ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ರೋಗಿ ಮತ್ತು ಸಂಬಂಧಿಕರಲ್ಲಿ ಸಂತಸ ತಂದಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಅವರ ನಿರಂತರ ಮಾರ್ಗದರ್ಶನ ಮತ್ತು ಪ್ರೇರಣೆಯಿಂದ ಷಈ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಹಲವಾರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ರೋಗಿಗಳ ವಿಶ್ವಾಸಕ್ಕೆ ಪಾತ್ರವಾಗಿದೆ.
ಬೆನ್ನುಮೂಳೆ ಗಡ್ಡೆ ಶಸ್ತ್ರಚಿಕಿತ್ಸೆ ಬಳಿಕ ಬಹಳ ಮುಖ್ಯವಾದ ಡ್ಯೂರಲ್ ಹಾನಿ ಸರಿಪಡಿಸುವ ಶಸ್ತ್ರಚಿಕಿತ್ಸೆ ಇದುವರೆಗೆ ಎಲ್ಲಿಯೂ ಯಶಸ್ವಿಯಾಗಿಲ್ಲ. ಆದರೆ ನಮ್ಮ ಆಸ್ಪತ್ರೆಯಲ್ಲಿ ಕೆಲವು ತಿಂಗಳ ಹಿಂದೆ ನಡೆಸಲಾದ ಡ್ಯೂರಲ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಜಾಗತಿಕ ಮಟ್ಟದಲ್ಲಿ ಗುರುತಸಲ್ಪಟ್ಟಿತ್ತು. ಇದೀಗ ಅತ್ಯಂತ ಸಂಕೀರ್ಣವಾದ ಬಾಯಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಲ್ಲಿ ನಮ್ಮ ಆಸ್ಪತ್ರೆ ಯಶಸ್ವಿಯಾಗಿದೆ. ಎಂ.ಜನಾರ್ದನ್ ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವ್ಯವಸ್ಥಾಪಕ ನಿರ್ದೇಶಕ.