ಇಂತವರು ರಾಜಕೀಯದಲ್ಲಿಯೇ ಇರಬಾರದು: CM Siddaramaiah

blank

ಶಿಗ್ಗಾಂವಿ: ಬಸವರಾಜ ಬೊಮ್ಮಾಯಿಯನ್ನು ಶಕುನಿ ಎಂದು ಈಗಷ್ಟೆ ಎಲ್ಲರೂ ಹೇಳಿದ್ದಾರೆ, ಒಳ ಒಪ್ಪಂದ ಮಾಡಿಕೊಂಡು ರಾಜಕಾರಣ ಮಾಡುವ ಬೊಮ್ಮಾಯಿ ಅಂತವರು ರಾಜಕಾರಣದಲ್ಲಿ ಇರಬಾರದು ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಗೆಲುವಿಗೆ ಪ್ರಚಾರ ಕೈಗೊಂಡು ಮಾತನಾಡಿದರು.

ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ. ನಾವು ಹಿಂದೆಯೂ ಅಷ್ಟೆ, ಈಗಲೂ ಅಷ್ಟೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದ ನೈತಿಕತೆ ಆಧಾರದಲ್ಲಿ‌ ಮತ್ತೆ ಜನರ ಬಳಿಗೆ ಬಂದು ಮತ ಕೇಳುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ ಅವರು, ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದ್ದೇವೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದರು.

ಇದನ್ನೂ ಓದಿ: ಕೃಷಿ ಜಮೀನಿನಲ್ಲಿ ನಿರ್ಮಿತ ಕಟ್ಟಡಕ್ಕಿಲ್ಲ ಖಾತಾ: ಬಿಬಿಎಂಪಿ ಮುಖ್ಯ ಆಯುಕ್ತರ ಹೇಳಿಕೆ

40 ವರ್ಷಗಳಿಂದ ನಾನು ಮಂತ್ರಿ. ಮುಖ್ಯಮಂತ್ರಿಯಾಗಿದ್ದೀನಿ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ. ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ ಎಂದರು.

ಚೆಕ್​ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡ್ಕಂಡು ಕೂತಿದ್ದ ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ ಎಂದು ನುಡಿದರು.

ಇದನ್ನೂ ಓದಿ:Accident | ರಸ್ತೆ ದಾಟುತ್ತಿದ್ದ ಯುವತಿಗೆ ಡಿಕ್ಕಿ ಹೊಡೆದ ಕಾರು.. ಸ್ಥಳದಲ್ಲೆ ಮೃತ

ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಆಚರಿಸಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

Sharad Pawar | ಸಂಸದೀಯ ರಾಜಕೀಯದಿಂದ ನಿವೃತ್ತಿಯ ಸುಳಿವು; ಎನ್​​​​ಸಿಪಿ ಮುಖ್ಯಸ್ಥ ಬಾರಾಮತಿಯಲ್ಲಿ ಹೇಳಿದಿಷ್ಟು..

BSY ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್ : CM Siddaramaiah

Share This Article

2025ರಲ್ಲಿ ಈ 3 ರಾಶಿಯವರಿಗೆ ರಾಜಯೋಗ!? ಅನೇಕ ರೀತಿಯಲ್ಲಿ ಹಣದ ಹರಿವು, ಐಷಾರಾಮಿ ಜೀವನ | Royal Life

Royal Life : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ…

ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು

ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…

ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips

Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…