More

    ಕೋವಿಡ್​ ಸೋಂಕಿನ ಪ್ರಕರಣಗಳಲ್ಲಿ ದಿಢೀರ್ ಹೆಚ್ಚಳ; ನಿರ್ಲಕ್ಷಿಸದೆ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಜ್ಞರ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಎಚ್3ಎನ್2 ಸೇರಿ ವಿವಿಧ ವೈರಾಣು ಸೋಂಕು ರೋಗಗಳು ಕಾಣಿಸಿಕೊಳ್ಳುತ್ತಿರುವ ಬೆನ್ನಲ್ಲೇ ಕೋವಿಡ್ ಸೋಂಕು ಪ್ರಕರಣಗಳು ದಿಢೀರ್ ಏರಿಕೆಯಾಗುವ ಮೂಲಕ ಆತಂಕ ಸೃಷ್ಟಿಸಿದೆ. ಬುಧವಾರ ರಾಜ್ಯದಲ್ಲಿ 120 ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿವೆ.

    ಆ ಮೂಲಕ ದಿನದ ಸೋಂಕು ಪ್ರಮಾಣ ದರ ಶೇ. 3.35ಕ್ಕೆ ಏರಿಕೆಯಾಗಿದೆ. ಮಾ.4 ರಂದು 65 ಮಂದಿಗೆ ಸೋಂಕು ದೃಢಪಟ್ಟಿತ್ತು. ಇದು ಈ ವರ್ಷದ ಅತಿ ಹೆಚ್ಚು ಪ್ರಕರಣವಾಗಿತ್ತು. ಈಗ ಈ ಸಂಖ್ಯೆ 120 ತಲುಪಿದೆ.

    ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ

    ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 3,581 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 120 ಮಂದಿಗೆ ಸೋಂಕು ದೃಢಪಟ್ಟಿದೆ. ಕಳೆದ ಕೆಲ ತಿಂಗಳುಗಳಿಂದ ಶೇ.1ರಿಂದ ಶೇ.1.5ರ ಆಸುಪಾಸಿನಲ್ಲಿದ್ದ ಸೋಂಕು ಪ್ರಮಾಣ ದರ ಶೇ.3.5ಕ್ಕೆ ತಲುಪಿದೆ. ರಾಜ್ಯಾದ್ಯಂತ ಗಂಟಲು ನೋವು, ಚಳಿ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕು ಲಕ್ಷಣಗಳು ಇರುವವರು ನಿರ್ಲಕ್ಷ್ಯ ಮಾಡದೆ ವೈದ್ಯರಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ತಜ್ಞರು ಸೂಚಿಸಿದ್ದಾರೆ.

    ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ಬುಧವಾರ 109 ಮಂದಿ ಗುಣಮುಖರಾಗಿದ್ದು, 445 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಸೋಂಕಿತರಲ್ಲಿ ಕೆಲವರು ಆಸ್ಪತ್ರೆ ಹಾಗೂ ಕೆಲವರು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts