ದಿ ವಿಲನ್​ ಯಶಸ್ಸಿನ ಖುಷಿಯನ್ನು ಪತ್ರದ ಮೂಲಕ ಹಂಚಿಕೊಂಡ ಕಿಚ್ಚ…

ಬೆಂಗಳೂರು: ಪ್ರೇಮ್​ ನಿರ್ದೇಶನದ ‘ದಿ ವಿಲನ್’ ಚಿತ್ರದ ಯಶಸ್ಸಿನ ಖುಷಿಯನ್ನು ಕಿಚ್ಚ ಸುದೀಪ ಪತ್ರದ ಮೂಲಕ ವ್ಯಕ್ತಪಡಿಸಿದ್ದಾರೆ.

ತಮ್ಮ ಅಧಿಕೃತ ಟ್ವೀಟರ್​ನಲ್ಲಿ ಪತ್ರ ಪೋಸ್ಟ್​ ಮಾಡಿದ್ದು, ನನ್ನ ಎಲ್ಲ ಅಭಿಮಾನಿ ಸ್ನೇಹಿತರೆ, ಅಭಿಮಾನಿ ಸಂಘಗಳ ಸದಸ್ಯರು ಹಾಗೂ ಮುಖ್ಯಸ್ಥರೇ, ನಿಮ್ಮೆಲ್ಲರಿಗೂ ನನ್ನ ಪ್ರೀತಿಯ ಅಪ್ಪುಗೆ ಎಂದು ತಮ್ಮ ಮಾತು ಆರಂಭಿಸಿದ್ದಾರೆ.

ಈ ಅಪ್ಪುಗೆ ನೀವೆಲ್ಲರೂ “ದಿ ವಿಲನ್” ಚಿತ್ರವನ್ನು ಉದಾರವಾಗಿ ಬರಮಾಡಿಕೊಂಡಿದಕ್ಕೆ, ಶಿವಣ್ಣ ಹಾಗೂ ಪ್ರೇಮ್ ರವರ ಮೇಲೆ ತೋರಿಸಿದ ಪ್ರೀತಿಗಾಗಿ, ಚಿತ್ರದ ಎರಡೂ ನಾಯಕ ನಟರ ಮೇಲೆ ಸಮನಾದ ಆದರ ವ್ಯಕ್ತಪಡಿಸಿದ್ದಕ್ಕೆ ಮತ್ತು ಚಿತ್ರಮಂದಿರಗಳಲ್ಲಿ ಶಾಂತಿಯನ್ನು ಕಾಪಾಡಿಕೊಂಡಿದ್ದಕ್ಕೆ. ನಾನು ನಿಮ್ಮೆಲ್ಲರ ಮನಸಿನಲ್ಲಿ ನೆಲಸಿದ್ದೇನೆ. ಆದ್ದರಿಂದಲೇ ನೀವು ಈ ಚಿತ್ರಕ್ಕೆ ಸ್ಪಂದಿಸಿದ ರೀತಿಯಲ್ಲಿ ನನ್ನದೇ ಪ್ರತಿಬಿಂಬ ಕಾಣುತಿದ್ದೇನೆ. ನನ್ನನ್ನು ಹೆಮ್ಮೆಪಡುವಂತೆ ಮಾಡಿದ ನನ್ನ ಕುಟುಂಬದ ಸದಸ್ಯರೇ ಆದ ನಿಮ್ಮ ಪ್ರತಿಯೊಬ್ಬರಿಗೂ ನಾನು ಎಂದೆಂದಿಗೂ ಚಿರಋಣಿ, ನಿಮ್ಮ ಕಿಚ್ಚ ಎಂದು ಹೇಳಿಕೊಂಡಿದ್ದಾರೆ.

ಅಭಿನಯ ಚಕ್ರರ್ವತಿಯ ಪತ್ರಕ್ಕೆ ಪ್ರತಿಕ್ರಿಯಿಸಿರುವ ಅಭಿಮಾನಿ ವರ್ಗವೂ ತಮ್ಮನ್ನು ಕುಟುಂಬ ವರ್ಗದವರು ಎಂದು ಪರಿಗಣಿಸಿರುವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಸದಾ ನಿಮ್ಮ ಬೆಂಬಲದಲ್ಲಿ ನಾವಿರುತ್ತೇವೆ ಎಂದು ಅಭಯ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್)