ನನಗೆ ತುಂಬಾ ಜನ ಲವ್ ಲೆಟರ್ ಬರೆಯುತ್ತಾರೆ! ಅಚ್ಚರಿ ತಂದ ಸುದೀಪ್ ಹೇಳಿಕೆ

Sudeep
Published on

ಬೆಂಗಳೂರು: ಕೆಲ ದಿನಗಳ ಹಿಂದೆ ನಟ ಕಿಚ್ಚ ಸುದೀಪ್ ಅವರಿಗೆ ಕೊಲೆ ಬೆದರಿಕೆ ಪತ್ರವೊಂದು ಬಂದಿತ್ತು. ಇದು ದೊಡ್ಡ ಮಟ್ಟದಲ್ಲೇ ಸಂಚಲನ ಸೃಷ್ಟಿಸಿತ್ತು. ಈ ಬಗ್ಗೆ ಸುದೀಪ್ ಪೊಲೀಸ್ ದೂರು ನೀಡಿದ್ದರು. ಇದೀಗ ಈ ಬಗ್ಗೆ ಮತಾನಾಡುತ್ತಾ, "ನನಗೆ ತುಂಬಾ ಜನ ಲವ್ ಲೆಟರ್ ಬರೆಯುತ್ತಾರೆ. ಅದಕ್ಕೆಲ್ಲಾ ತಲೆಕೆಡಿಸಿಕೊಳ್ಳೋಕೆ ಆಗಲ್ಲ" ಎಂದು ಸುದೀಪ್ ವ್ಯಂಗ್ಯವಾಡಿದ್ದಾರೆ.

ಬೊಮ್ಮಾಯಿ ಪರ ಪ್ರಚಾರ

ಸುದೀಪ್ ಈಗಾಗಲೇ ಸಿಎಂ ಬೊಮ್ಮಾಯಿ ಪರ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ಇಂದಿನಿಂದ ಮತ್ತೆ ಮತಬೇಟೆಗೆ ಮುಂದಾಗಿರುವ ಸುದೀಪ್, ಮೊಣಕಾಲ್ಮೂರು, ಜಗಳೂರು, ಮಾಯಕೊಂಡ, ಸೊಂಡೂರು ಸೇರಿದಂತೆ ಹಲವೆಡೆ ಕ್ಯಾಂಪೇನ್ ಮಾಡಲಿದ್ದಾರೆ. ನಾನು ಪ್ರಚಾರಕ್ಕೆ ಹೋಗುವ ಅಭ್ಯರ್ಥಿಗಳಿಗೆ ಒಳ್ಳೆಯದಾಗಲಿ. ಆತ್ಮೀಯರಿಗೋಸ್ಕರವೇ ನಾನು ಪ್ರಚಾರಕ್ಕೆ ಇಳಿದಿರುವುದು ಎಂದು ಸುದೀಪ್ ಹೇಳಿಕೊಂಡಿದ್ದಾರೆ.

ಇಂದಿನಿಂದ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದು, ಮೊಳಕಾಲ್ಮೂರು ಕ್ಷೇತ್ರದಿಂದ ಪ್ರಚಾರ ಆರಂಭಿಸಲಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ತಿಪ್ಪೇಸ್ವಾಮಿ ಪರವಾಗಿ ಕಿಚ್ಚ ಮತಯಾಚನೆ ಮಾಡಲಿದ್ದಾರೆ.

ರೋಡ್ ಶೋ

ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ತೆರಳಿ, 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ನಂತರ ಮಾಯಕೊಂಡ ಕ್ಷೇತ್ರದತ್ತ ಪ್ರಯಾಣ ಬೆಳೆಸಲಿದ್ದಾರೆ. ಮಧ್ಯಾಹ್ನ 3.10ಕ್ಕೆ ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ನಾಯ್ಕ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ಅಲ್ಲದೇ, ಸರಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಅವರು ಭಾಗಿಯಾಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net