'ವಿಶಿಂಗ್​ ಯೂ ದಿ ಬೆಸ್ಟ್​ ಮಾಮಾ ...' ಎಂದು ಅಭಿನಂದಿಸಿದ ಸುದೀಪ್​

Bommai - Sudeep - Final
Published on

ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ಹಲವು ರಾಜಕಾರಣಿಗಳು, ಸೆಲೆಬ್ರಿಟಿಗಳು, ಜನಸಾಮಾನ್ಯರು ಬೊಮ್ಮಾಯಿ ಅವರಿಗೆ ರಾಜ್ಯದ ಹೊಸ ಮುಖ್ಯಮಂತ್ರಿಯಾಗಿರುವುದಕ್ಕೆ ಅಭಿನಂದನೆಗಳನ್ನು ಸೂಚಿಸುತ್ತಿದ್ದಾರೆ.

ಇದೀಗ ನಟ ಸುದೀಪ್​ ಸಹ ಹೊಸ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಬೊಮ್ಮಾಯಿ ಅವರನ್ನು ಹಲವು ವರ್ಷಗಳಿಂದ ಬಲ್ಲ ಸುದೀಪ್​, ಅವರನ್ನು ಮಾಮ ಎಂದು ಪ್ರೀತಿಯಿಂದ ಸಂಬೋಧಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಸುದೀಪ್​, 'ನಾನು ಅವರ ಸರಳತೆಯನ್ನು ನೋಡಿ ಬೆಳೆದವ. ನಾನು ಚಿತ್ರರಂಗಕ್ಕೆ ಬಂದ ಹೊಸದರಲ್ಲಿ ಅವರು ಕೊಟ್ಟ ಸಹಕಾರ ಮತ್ತು ಪ್ರೋತ್ಸಾಹಗಳನ್ನು ಮರೆಯುವುದಕ್ಕೆ ಸಾಧ್ಯವೇ ಇಲ್ಲ. ಆಲ್​ ದಿ ಬೆಸ್ಟ್​ ಮಾಮ ...' ಎಂದು ಸುದೀಪ್​ ಬರೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net