ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸುಧಾಮೂರ್ತಿ ಆಯ್ಕೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇನ್ಫೋಸಿಸ್​ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಸಮಾಜ ಸುಧಾರಕಿ ಸುಧಾಮೂರ್ತಿ ಅವರು ಆಯ್ಕೆಯಾಗಿದ್ದಾರೆ.

ಮಾರ್ಚ್​ 2 ಮತ್ತು 3ಕ್ಕೆ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನದಲ್ಲಿ ಮಹಿಳೆ ಮತ್ತು ಚಳವಳಿ, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಸೇರಿ ವಿವಿಧ ವಿಷಯದ ಮೇಲೆ ಗೋಷ್ಠಿಗಳು ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಮನು ಬಳಿಗಾರ್ ಮಾಹಿತಿ ನೀಡಿದರು.

One Reply to “ರಾಜ್ಯ ಮಟ್ಟದ ಮಹಿಳಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಸುಧಾಮೂರ್ತಿ ಆಯ್ಕೆ”

Comments are closed.