More

    ಮಲಘಾಣದಲ್ಲಿ 350 ಕೋಟಿ ರೂ.ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ : ಶಾಸಕ ಸೋಮನಗೌಡ ಪಾಟೀಲ ಭರವಸೆ

    ಹೂವಿನಹಿಪ್ಪರಗಿ: ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿರುವ ಯುವಕರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದಲ್ಲಿ 350 ಕೋಟಿ ರೂ.ವೆಚ್ಚದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಿಸಲಾಗುವುದು ಎಂದು ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು.

    ದೇವರಹಿಪ್ಪರಗಿ ಮತಕ್ಷೇತ್ರ ವ್ಯಾಪ್ತಿಯ ರೆಬಿನಾಳ ಗ್ರಾಮದಲ್ಲಿ 2019-20ನೇ ಸಾಲಿನ ಮಳೆ ಪರಿಹಾರ ಕಾರ್ಯಕ್ರಮದಡಿ 50 ಲಕ್ಷ ರೂ.ವೆಚ್ಚದಲ್ಲಿ ಗುಣಮಟ್ಟದ ಸಿಸಿ ರಸ್ತೆ ಕಾಮಗಾರಿಗೆ ಇತ್ತೀಚೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

    ಗ್ರಾಮದಲ್ಲಿ ಈಗಾಗಲೆ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಂಡಿದ್ದು ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಪ್ರಧಾನಿ ಮೋದಿಜಿ ಅವರ ಕನಸಿನಂತೆ ಗ್ರಾಮೀಣ ಜನತೆಗೆ ಜಲ ಜೀವನ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ಶುದ್ಧ ಕುಡಿವ ನೀರು ಒದಗಿಸಲಾಗಿದೆ ಎಂದರು.

    ಇಂಗಳೇಶ್ವರ ಗ್ರಾಮದಿಂದ ರೆಬಿನಾಳ ಗ್ರಾಮಕ್ಕೆ ಸುಸಜ್ಜಿತ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ರೂ.ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಕೈಗೊಳ್ಳಲಾಗುವುದು. ವಿಜಯಪುರ 203 ಕಿ.ಮೀ. ಹಾಗೂ ಚಿಮ್ಮಲಗಿ 176 ಕಿ.ಮೀ.ಮುಖ್ಯ ಕಾಲುವೆಗೆ ಉಪಕಾಲುವೆ ನಿರ್ಮಿಸಲು 680 ಕೋಟಿ ರೂ.ಮಂಜೂರಿಗಾಗಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಯೋಜನೆ ಪೂರ್ಣಗೊಂಡರೆ ಜಿಲ್ಲೆಯ 1.25ಲಕ್ಷ ಎಕರೆ ಜಮೀನು ನೀರಾವರಿಗೆ ಒಳಪಡಲಿದೆ. ಮೂಲ ಸೌಲಭ್ಯಕ್ಕೆ ಆದ್ಯತೆ ನೀಡುವ ಜತೆಗೆ ಜನತೆ ಸಹಕಾರದಿಂದ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದು ಸ್ವಾವಲಂಬಿ ಬದುಕು ನಡೆಸಬೇಕು ಎಂದು ಗ್ರಾಮದ ಮುಖಂಡ ರಮೇಶ ಮಸಬಿನಾಳ ಮಾತನಾಡಿದರು.

    ಬಸವನಬಾಗೇವಾಡಿ ಪುರಸಭೆ ಮುಖ್ಯಾಧಿಕಾರಿ ಬಸವರಾಜ ಹಿರೇಮಠ, ಭೀಮನಗೌಡ ಸಿದರಡ್ಡಿ, ಯಲ್ಲಪ್ಪ ಮಾದರ, ಶರಣಗೌಡ ಬಿರಾದಾರ, ಚಿದಾನಂದ ಹಚ್ಯಾಳ, ಮಾಂತೇಶ ಮನಗೂಳಿ, ಚಂದ್ರಶೇಖರ ಮೇಲಿನಮನಿ, ಆನಂದಸ್ವಾಮಿ ಇತರರಿದ್ದರು. ಮಾಂತೇಶ ಹುಲ್ಲೂರ ಸ್ವಾಗತಿಸಿ ನಿರೂಪಿಸಿದರು. ಗ್ರಾಮದ ಬಸವೇಶ್ವರ ಜಾತ್ರೆ ನಿಮಿತ್ತ ಹಮ್ಮಿಕೊಂಡ ಎತ್ತಿನ ಬಂಡಿ ಸ್ಪರ್ಧೆಗೆ ಚಾಲನೆ ನೀಡಲು ಗ್ರಾಮಸ್ಥರು ಹಾಗೂ ಅಭಿಮಾನಿಗಳು ಶಾಸಕರನ್ನು ಎತ್ತಿನ ಬಂಡಿಯಲ್ಲಿ ಬರಮಾಡಿಕೊಂಡರು.
    .

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts