More

    ಸಕ್ಕರೆ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ

    ಬೆಳಗಾವಿ: ಒಂದು ಕಾಲಕ್ಕೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಸಕ್ಕರೆ ಜಿಲ್ಲೆ ಬೆಳಗಾವಿಯಲ್ಲೀಗ ಬಿಜೆಪಿಯದ್ದೇ ಪಾರುಪತ್ಯ. ಜಿಲ್ಲೆಯ 18 ಶಾಸಕರ ಪೈಕಿ 13 ಶಾಸಕರು ಬಿಜೆಪಿಗರೇ ಆಗಿದ್ದು, ಬೆಳಗಾವಿಯ ಕಮಲಪಡೆ ನಾಯಕರಿಗೆ ಭೀಮಬಲ ಬಂದಂತಾಗಿದೆ.

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರಿಗೂ ಸಚಿವ ಸ್ಥಾನ ಲಭಿಸಿದ್ದು, ಜಿಲ್ಲೆಯಲ್ಲಿರುವ ಸಚಿವರ ಸಂಖ್ಯೆ ಸದ್ಯ 5ಕ್ಕೇರಿದೆ.

    ಕಳೆದ ಬಾರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬೆಜೆಪಿ ಸರ್ಕಾರ ರಚನೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಅನೇಕ ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿಗೆ ಆಗಮಿಸಿ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡಿದ್ದು ಈಗ ಇತಿಹಾಸ.

    ಗಡಿ ಜಿಲ್ಲೆಗೆ ಜೈ ಎಂದ ಬಿಎಸ್‌ವೈ: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಿಲ್ಲೆಯ ಬಹುತೇಕ ಎಲ್ಲ ಶಾಸಕರಿಗೆ ಒಂದಿಲ್ಲೊಂದು ರೀತಿಯಲ್ಲಿ ಅಧಿಕಾರ ಮತ್ತು ಅನುದಾನ ನೀಡುತ್ತಿದ್ದಾರೆ. ಆದರೂ ಕೂಡ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೆಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಶೀಘ್ರದಲ್ಲಿಯೇ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯತಿ ಹಾಗೂ ಮಹಾನಗರ ಪಾಲಿಕೆ ಚುನಾವಣೆ ಜರುಗಲಿವೆ. ಹೀಗಾಗಿ ಬೇರು ಮಟ್ಟದಲ್ಲಿ ಬಿಜೆಪಿ ಮತ್ತಷ್ಟು ಗಟ್ಟಿಕೊಳ್ಳಬೇಕಾಗಿದೆ.

    ಸಚಿವ ಸ್ಥಾನದ ವಿಚಾರವಾಗಿ ಬೆಂಗಳೂರು ಬಿಟ್ಟರೆ ಎಲ್ಲ ಜಿಲ್ಲೆಗಳಿಗಿಂತ ಬೆಳಗಾವಿಗೆ ಹೆಚ್ಚು ಪ್ರಾತಿನಿಧ್ಯ ನೀಡಲಾಗಿದೆ. ಇದು ಬೇರೆ ಜಿಲ್ಲೆಯ ಪಕ್ಷದ ಶಾಸಕರ ಆಕ್ರೋಶಕ್ಕೂ ಕಾರಣವಾಗಿದೆ. ಬಿಜೆಪಿ 10 ಶಾಸಕರು ವಿವಿಧ ನಿಗಮ ಮಂಡಳಿಗಳಲ್ಲಿದ್ದಾರೆ. ಬಿಜೆಪಿ ಮುಖಂಡ ಈರಣ್ಣ ಕಡಾಡಿ ಅವರಿಗೂ ಕೆಲ ತಿಂಗಳ ಹಿಂದಷ್ಟೇ ರಾಜ್ಯಸಭಾ ಸದಸ್ಯ ಸ್ಥಾನ ನೀಡಲಾಗಿದೆ.

    ಹುಕ್ಕೇರಿಯಿಂದ ಏಳು ಬಾರಿ ಗೆದ್ದಿರುವ ಉಮೇಶ ಕತ್ತಿ ಅವರು ವಿಧಾನಸಭೆಯ ಹಿರಿಯ ಸದಸ್ಯರಲ್ಲಿ ಒಬ್ಬರು. ಅವರಿಗೆ ಸಚಿವ ಸ್ಥಾನ ನೀಡಿರುವುದು ಸ್ವಾಗತಾರ್ಹವಾಗಿದೆ.
    | ರಮೇಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ

    | ರಾಯಣ್ಣ ಆರ್.ಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts