

ನಂಜನಗೂಡು: ತಾಲೂಕಿನ ಹೊರಳವಾಡಿ ಗ್ರಾಮದಲ್ಲಿ ಸೋಮವಾರ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಕಬ್ಬಿನ ಬೆಳೆ ಸುಟ್ಟು ಹೋಗಿದೆ.
ಗ್ರಾಮದ ರೈತ ಪುಟ್ಟಸ್ವಾಮಿ ಅವರ ಕಬ್ಬು ಸುಟ್ಟು ಭಸ್ಮವಾಗಿದೆ. ಪುಟ್ಟಸ್ವಾಮಿ ಅವರು 1.30 ಎಕರೆಯಲ್ಲಿ ಕಬ್ಬಿನ ಬೆಳೆ ಬೆಳೆದಿದ್ದು, ವಾರದಲ್ಲಿ ಕಟಾವು ಮಾಡಬೇಕಾಗಿತ್ತು. ಅವರ ಮೋಟಾರ್ ಪಂಪ್ಗೆ ಎಳೆಯಲಾಗಿದ್ದ ವಿದ್ಯುತ್ ತಂತಿಗಳಿಗೆ ಒಣಗಿದ್ದ ಕಬ್ಬಿನ ಸಿಪ್ಪೆ ತಗುಲಿ ಬೆಳೆ ಸುಟ್ಟುಹೋಗಿದೆ.