ಸಕ್ಕರೆ ಕಾರ್ಖಾನೆ ಮಾಲೀಕರ ಸಮ್ಮುಖದಲ್ಲಿಯೇ ಪ್ರತಿ ಟನ್ ಕಬ್ಬಿಗೆ 3,300 ದರ ನಿಗದಿ ಆಗಿದೆ: CM ಸಿದ್ದರಾಮಯ್ಯ

Bbau - 2025-11-08T123950.539
Published on

ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು, ರೈತ ಮುಖಂಡರೊಂದಿಗೆ ಚರ್ಚಿಸಿ ನಿನ್ನೆ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರದ ಬಗ್ಗೆ ಮಾಜಿ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಸಕ್ಕರೆ ಮಾಲೀಕರು ಸಮ್ಮುಖದಲ್ಲಿಯೇ ಈ ತೀರ್ಮಾನವಾಗಿದೆ ಎಂದು CM ಸಿದ್ದರಾಮಯ್ಯ ಹೇಳಿದರು.

ದಾಸಶ್ರೇಷ್ಠ ಕನಕದಾಸರ ಜಯಂತಿಯ ಅಂಗವಾಗಿ ಬೆಂಗಳೂರಿನ‌ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಯ ಮುಂಭಾಗ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜೂನ್​ನಲ್ಲಿ ಜಿಲ್ಲಾಧಿಕಾರಿಗಳು ಹೇಳುವವರಿಗೆ 3,200 ರೂ.ಗಳಿಗೆ ಅವರು ಒಪ್ಪಿರಲಿಲ್ಲ. ನಂತರದಲ್ಲಿ ಒಪ್ಪಿಕೊಂಡರು. 50 ರೂ.ಗಳನ್ನು ಕಾರ್ಖಾನೆ ಮಾಲೀಕರು ಕೊಡಬೇಕೆಂದು ಬಹಳ ಸ್ಪಷ್ಟವಾಗಿ ಹೇಳಲಾಗಿದೆ. ಸರ್ಕಾರ 50 ರೂ. ಪ್ರೋತ್ಸಾಹಧನ ಪಾವತಿಸಲಿದೆ. 10.25 ರಿಕವರಿ ಇದ್ದರೆ 3100 ರೂ.ಜೊತೆಗೆ 100 ರೂ.ಗಳು, ಹಾಗೂ 11.25 ರಿಕವರಿ ಇದ್ದರೆ 3200 ಜೊತೆಗೆ 100 ರೂ. ಸೇರಿದಂತೆ ಒಟ್ಟು 3,300 ಒದಗಿಸಲಾಗುವುದು ಎಂದರು.

ಆದೇಶ ಹೊರಡಿಸಲಾಗುವುದು

ಈ ಬಗ್ಗೆ ಸರ್ಕಾರದ ಆದೇಶ ಹೊರಡಿಸಲಾಗುವುದು. ಸಚಿವ ಶಿವಾನಂದ ಪಾಟೀಲರು ಅಲ್ಲಿಯೇ ಘೋಷಣೆ ಮಾಡಲಿದ್ದಾರೆ ಎಂದರು. ಅಲ್ಲದೆ, ಇದೇ ಸಂದರ್ಭದಲ್ಲಿ ಸರ್ಕಾರ ಬೇರೆ ವಿಚಾರಗಳ ಬಗ್ಗೆ ಪ್ರತ್ಯೇಕ ಸಭೆ ನಡೆಸಲು ತೀರ್ಮಾನಿಸಿದೆ ಎಂದು ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net