More

    ಕೋವಿಡ್ ನಿಯಂತ್ರಿಸಲು ಆರೋಗ್ಯ ಇಲಾಖೆ ಸಲಹೆ

    ಬೆಂಗಳೂರು: ನೆರೆಯ ಕೇರಳ ಹಾಗೂ ತಮಿಳುನಾಡಿನಲ್ಲಿ ಕೋವಿಡ್ ರೂಪಾಂತರ ತಳಿ (ಜೆಎನ್-1)ಪ್ರಕರಣ ಪತ್ತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕುರಿತು ಆರೋಗ್ಯ ಇಲಾಖೆ ಸಾರ್ವಜನಿಕ ಸಲಹೆ ನೀಡಿದೆ.

    ಪ್ರಸ್ತುತ ಚಳಿಗಾಲದ ಹವಾಮಾನ ಹಾಗೂ ಕ್ರಿಸ್‌ಮಸ್ ಮತ್ತು ಹೊಸವರ್ಷಾಚರಣೆಯಲ್ಲಿ ಜನದಟ್ಟಣೆಯಿಂದಾಗಿ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ ಆರೋಗ್ಯ ಇಲಾಖೆ ಕೋವಿಡ್ ರಾಜ್ಯ ತಾಂತ್ರಿಕ ಸಲಹಾ ಸಮಿತಿ ಶಿಾರಸು ಆಧರಿಸಿ ಸೂಚನೆಗಳನ್ನು ಪಾಲಿಸುವಂತೆ ಇಲಾಖೆ ಆಯುಕ್ತ ಡಿ. ರಂದೀಪ್ ಸಾರ್ವಜನಿಕವಾಗಿ ಸೂಚನೆ ನೀಡಿದ್ದಾರೆ.

    ಹಿರಿಯ ನಾಗರಿಕರು (60 ವರ್ಷ ಮೇಲ್ಪಟ್ಟವರು), ದೀರ್ಘಕಾಲೀನ ಆರೋಗ್ಯ ಸಮಸ್ಯೆ ಹೊಂದಿರುವವರು (ಕಿಡ್ನಿ, ಹೃದಯ, ಲಿವರ್ ಇತ್ಯಾದಿ) ಗರ್ಭಿಣಿಯರು, ಬಾಣಂತಿಯರು ಮನೆಯಿಂದ ಹೊರ ಹೋಗುವಾಗ, ಸಾರ್ವಜನಿಕವಾಗಿ ಹೆಚ್ಚು ಜನಸಂದಣಿ ಇರುವ ಕಡೆಗಳಲ್ಲಿ ಮಾಸ್ಕ್ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇತ್ಯಾದಿ ಶೀತ ಸಂಬಂಧಿ ತೊಂದರೆಗಳು ಹಾಗೂ ಸೋಂಕು ಲಕ್ಷಣಗಳನ್ನು ಹೊಂದಿರುವವರು ತಕ್ಷಣವೇ ವೈದ್ಯಯ ಸಲಹೆ ಪಡೆಯಬೇಕು. ಪೂರ್ಣ ಗುಣ ಹೊಂದುವವರೆಗೂ ಪ್ರತ್ಯೇಕ ವಾಸದಲ್ಲಿರಬೇಕು. ಮಾಸ್ಕ್ ಧರಿಸುವುದು, ಆಗಾಗ್ಗೆ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

    ಅಂತಾರಾಷ್ಟ್ರೀಯ ಪ್ರಯಾಣ ಸಂದರ್ಭದಲ್ಲಿ ಎಚ್ಚರಿಕೆ ವಹಿಸಬೇಕು. ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮತ್ತು ಜನಸಂದಣಿ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts