ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ! ಹಣದಾಸೆಗೆ ಗಂಡನಿಂದಲೇ ಕೊಲೆ?!

su
Published on

ಬೆಂಗಳೂರು: ನಗರದ ಆನೇಕಲ್​ ಪಟ್ಟಣದಲ್ಲಿ ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಆದರೆ ಇದು ಆತ್ಮಹತ್ಯೆಯಲ್ಲ, ಹಣದ ಆಸೆಗೆ ಗಂಡನ ಮನೆಯವರೇ ಕೊಲೆ ಮಾಡಿದ್ದಾರೆ ಎಂದು ಮೃತಳ ತಂದೆ ತಾಯಿ ಆರೋಪಿಸಿದ್ದಾರೆ.

ಸುಗುಣ ಮತ್ತು ದಿವಾಕರ್​ಗೆ ಎಂಟು ವರ್ಷಗಳ ಹಿಂದೆ ಮದುವೆಯಾಗಿತ್ತು. ಈ ದಂಪತಿಗೆ ಒಬ್ಬ ಮಗಳೂ ಇದ್ದಾಳೆ. ಆದರೆ ಮದುವೆಯಾದಾಗಿನಿಂದಲೂ ದಿವಾಕರ್​, ಸುಗುಣಗೆ ಕಿರುಕುಳ ನೀಡುತ್ತಿದ್ದನಂತೆ. ಹಣದ ವಿಚಾರದಲ್ಲಿ ಯಾವಾಗಲೂ ಜಗಳವಾಗುತ್ತಿತ್ತಂತೆ. ಮಂಗಳವಾರ ಕೂಡ ಇದೇ ರೀತಿ ಜಗಳವಾಗಿದೆ.

ಬುಧವಾರ ಮಧ್ಯಾಹ್ನದ ವೇಳೆಗೆ ಸುಗುಣ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಈ ಪ್ರಕರಣದ ತನಿಖೆಗೆಂದು ಪತಿ ದಿವಾಕರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net