NIA : ಹಿಂದು ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ನಡೆದಿರುವುದು ಖಂಡನೀಯ. ಪೊಲೀಸ್ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಇದನ್ನೂ ಓದಿ:ಐಫಾ ಪ್ರಶಸ್ತಿ ಪ್ರದಾನ ಸಮಾರಂಭ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ | Sandalwood rises above Bollywood
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದರು, ರಾಜ್ಯದ ಜನತೆಗೆ, ಹಿಂದೂ ಸಂಘಟನೆಗಳು ಹಾಗೂ ಕಾರ್ಯಕರ್ತರಿಗೆ ಈ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿಲ್ಲದಂತಾಗಿದೆ ಎಂದರು.
ಭಾರತೀಯ ಜನತಾ ಪಾರ್ಟಿಯ ನಮ್ಮೆಲ್ಲ ನಾಯಕರು ಹಿಂದು ಕಾರ್ಯಕರ್ತ ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿ ರಾಜ್ಯ ಬಿಜೆಪಿ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ. ರಾಜ್ಯ ಸರ್ಕಾರ ಈ ರೀತಿಯ ಘಟನೆ ನಡೆದಾಗ ಎಂದೂ ನಮ್ಮ ಕಾರ್ಯಕರ್ತರ ಪರ ನಿಂತಿಲ್ಲ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಟ್ರೂಲಿ I LOVE YOU ಎಂದು 11 ವರ್ಷದ ವಿದ್ಯಾರ್ಥಿನಿಗೆ ಪ್ರೇಮಪತ್ರ ಬರೆದ ಶಿಕ್ಷಕ!: ಪತ್ರದಲ್ಲೇನಿದೆ?
ನಾನು ಅವರ ದುಃಖಿತ ಕುಟುಂಬವನ್ನು ಭೇಟಿಯಾಗಿ ನಮ್ಮ ಹೃತ್ಪೂರ್ವಕ ಸಂತಾಪ ಸೂಚಿಸಿದೆ ಮತ್ತು ಪಕ್ಷದಿಂದ 25 ಲಕ್ಷ ರೂ.ಗಳ ಆರ್ಥಿಕ ಸಹಾಯವನ್ನು ನೀಡಿದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅರ್ಜೆಂಟೀನಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಸುನಾಮಿ ಎಚ್ಚರಿಕೆ! | Earthquake