

ಪುತ್ತೂರು ಗ್ರಾಮಾಂತರ: ಅನಾರೋಗ್ಯದಿಂದ ಬಳಲುತ್ತಿದ್ದ ಸ್ಥಳೀಯ ನಿವಾಸಿಯೊಬ್ಬರು ಮನೆಯ ಸಮೀಪ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಮಡ್ಯಲಮಜಲು ಎಂಬಲ್ಲಿ ನಡೆದಿದೆ. ಉಮೇಶ್ ಗೌಡ(62) ಆತ್ಮಹತ್ಯೆ ಮಾಡಿಕೊಂಡವರು. ಗುರುವಾರ ರಾತ್ರಿ ಊಟ ಮಾಡಿ, ಮನೆಯಲ್ಲಿ ಮಲಗಿದ್ದ ಉಮೇಶ್ ಗೌಡ ರಾತ್ರಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮನೆಮಂದಿಯ ಗಮನಕ್ಕೆ ಬಂದಿದೆ. ಸುಮಾರು 9 ತಿಂಗಳಿನಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಗುಣಮುಖವಾಗದೆ ಮಾನಸಿಕವಾಗಿ ನೊಂದಿದ್ದರು. ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.