ಸಾಲದ ಹೊರೆಯಿಂದ ಬೇಸತ್ತು ಆತ್ಮಹತ್ಯೆ

Suicide
Published on

ಕಡಬ: ಸಾಲ ಬಾಧೆ ಮತ್ತು ಆರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಐತ್ತೂರು ಗ್ರಾಮದಲ್ಲಿ ನಡೆದಿದೆ. ಕಡಬ ತಾಲೂಕು ಐತ್ತೂರು ಗ್ರಾಮದ ಕೇನ್ಯ ನಿವಾಸಿ ಉಮೇಶ್ ಗೌಡ(53ವ) ಆತ್ಮಹತ್ಯೆ ಮಾಡಿಕೊಂಡವರು.

ಕೃಷಿ ಕೆಲಸ ಮಾಡಿಕೊಂಡಿದ್ದ ಅವರು ಮೊದಲಿನಿಂದಲೂ ಎಡಗೈ ಸ್ವಾಧೀನ ಕಳೆದುಕೊಂಡಿದ್ದರು.ಇತ್ತೀಚೆಗೆ ಬಲಗೈ ಕೂಡ ಸ್ವಾಧೀನ ಕಳೆದುಕೊಂಡು ಚಿಕಿತ್ಸೆ ಪಡೆದಿದ್ದರೂ ನೋವು ಕಡಿಮೆಯಾಗಿಲ್ಲ ಎನ್ನಲಾಗಿದೆ. ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿದ್ದು, ತೀರಿಸಲಾಗದೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಅ.12ರಂದು ವಿಷ ಪದಾರ್ಥ ಸೇವಿಸಿ ಒದ್ದಾಡುತ್ತಿರುವುದನ್ನು ಗಮನಿಸಿ ಆಸ್ಪತ್ರೆಗೆ ದಾಖಲಿಸಿದರೂ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಮೃತರ ಮಗಳು ಕಾವ್ಯಶ್ರೀ ಅವರು ನೀಡಿದ ದೂರಿನಂತೆ ಕಡಬ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net