

ಪುತ್ತೂರು ಗ್ರಾಮಾಂತರ: ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನಿಡ್ಪಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಡಿಂಬಾಡಿ ನಿವಾಸಿ ಶಿವಪ್ಪ ನಾಯ್ಕ(55) ಆತ್ಮಹತ್ಯೆ ಮಾಡಿಕೊಂಡವರು. ಕೂಲಿ ಕೆಲಸ ಮಾಡುತ್ತಿದ್ದ ಶಿವಪ್ಪ ನಾಯ್ಕ ಬುಧವಾರ ಮನೆಯ ಸಮೀಪ ಇರುವ ಖಾಸಗಿ ವ್ಯಕ್ತಿಯೊಬ್ಬರ ಗುಡ್ಡದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದೀಚೆಗೆ ಮನೆಯಲ್ಲೇ ಇದ್ದು, ಮಾನಸಿಕ ಖಿನ್ನತೆಗೊಳಗಾಗಿದ್ದರು. ಇದೇ ಕಾರಣದಿಂದಾಗಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.