ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು ಗ್ರಾಮಾಂತರ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಪಂಜಳ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸ್ತವ್ಯ ಇದ್ದ ವಿಶ್ವನಾಥ ಯಾನೆ ವೇಣು (32) ಆತ್ಮಹತ್ಯೆ ಮಾಡಿಕೊಂಡವರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇದೇ ಕಾರಣದಿಂದ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿದೆ. ಈ ಕುರಿತು ಮೃತರ ಸಹೋದರ ಸಂಪ್ಯ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.