ಉಳ್ಳಾಲ: ಕೊಣಾಜೆ ಠಾಣಾ ವ್ಯಾಪ್ತಿಯ ಬಟ್ಯಡ್ಕ ಎಂಬಲ್ಲಿ ವಿವಾಹಿತರೋರ್ವರು ಶುಕ್ರವಾರ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಜನಾಡಿ ಗ್ರಾಮದ ಬಟ್ಯಡ್ಕ ನಿವಾಸಿ ಪ್ರಕಾಶ್ ಕುಮಾರ್ ಅಂದ್ರಾದೆ(47) ಆತ್ಮಹತ್ಯೆ ಮಾಡಿಕೊಂಡವರು. ಹಲವು ವರ್ಷಗಳಿಂದ ದೇರಳಕಟ್ಟೆಯಲ್ಲಿ ಟಯರ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಪಾನೀರ್ ಸಮೀಪ ಮನೆ ನಿರ್ಮಿಸಿ ವಾಸವಾಗಿದ್ದ ಅವರು ಕೆಲವು ದಿನಗಳಿಂದ ಬಟ್ಯಡ್ಕದಲ್ಲಿ ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಧರ್ಮ ಉಳಿಸುವ ಕಾರ್ಯ ನಿರಂತರ : ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು ಆಶಯ