ಶಿಗ್ಗಾಂವಿ: ಮನೆ ಕಟ್ಟಲು ಹಾಗೂ ಮಗಳ ಮದುವೆ ಸಲುವಾಗಿ ವಾಡಿದ ಸಾಲ ತೀರಿಸಲಾಗದೆ ಬ್ಯಾಂಕ್ ನೌಕರನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡ ಟನೆ ಪಟ್ಟಣದ ಮೌಲಾಲಿ ನಗರದಲ್ಲಿ ಬುಧವಾರ ನಡೆದಿದೆ.
ಹುಬ್ಬಳ್ಳಿಯ ಬ್ಯಾಂಕ್‌ವೊಂದರಲ್ಲಿ ಸಹಾಯಕ ವ್ಯವಸ್ಥಾಪಕರಾಗಿದ್ದ ಮಂಜುನಾಥಗೌಡ ನಿಂಗನಗೌಡ ಸಣ್ಣಗೌಡ್ರ ಮೃತ ನೌಕರ.
ಖಾಸಗಿ ಬ್ಯಾಂಕ್ ಹಾಗೂ ಕೈಗಡವಾಗಿ 11 ಲಕ್ಷ ರೂ. ಸಾಲ ವಾಡಿದ್ದ. ಆದರೆ, ಸಾಲವನ್ನು ಹೇಗೆ ತೀರಿಸುವುದು ಎಂಬ ಚಿಂತೆಯಲ್ಲಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ವಾಡಿಕೊಂಡಿದ್ದಾನೆ ಎನ್ನಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.