6 ಎಕರೆ ಜಮೀನುಳ್ಳ ರೈತ 2 ಲಕ್ಷ ರೂ. ಸಾಲಕ್ಕೆ ಹೆದರಿ ಆತ್ಮಹತ್ಯೆ

ಬೀದರ್: ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಂಡಕಾಪೂರ ಗ್ರಾಮದಲ್ಲಿ ರೈತನೋರ್ವ ಸಾಲಬಾಧೆಯಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ.

ಜ್ಜಾನರೆಡ್ಡಿ ಈರಪ್ಪರೆಡ್ಡಿ(65) ಮೃತ ರೈತ. ಇವರು 6 ಎಕರೆ ಜಮೀನು ಹೊಂದಿದ್ದು, ಪಿಕೆಪಿಎಸ್​ನಲ್ಲಿ 50,000 ರೂ ಮತ್ತು ಸಿಂಡಿಕೇಟ್ ಬ್ಯಾಂಕ್ ನಲ್ಲಿ 1. 50 ಲಕ್ಷ ರೂ. ಸಾಲ ಮಾಡಿದ್ದರು ಎನ್ನಲಾಗಿದೆ. ಇದನ್ನು ತೀರಿಸಲು ಸಾಧ್ಯವಾಗದೇ ಈರಪ್ಪರೆಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಪ್ರಕರಣ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)