More

    ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಅಧಿಕಾರಿಗಳ ತಂಡ ಭೇಟಿ; ವಸ್ತುಸ್ಥಿತಿ ಪರಿಶೀಲನೆ

    ರಾಣೆಬೆನ್ನೂರ: ಜಿಲ್ಲೆಯಲ್ಲಿ ರೈತ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕೃಷಿ ಇಲಾಖೆ ಅಧಿಕಾರಿಗಳ ತಂಡ ಗುರುವಾರ ತಾಲೂಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಭೇಟಿ ನೀಡಿ ಮನೆಯ ಸ್ಥಿತಿಗತಿ ಹಾಗೂ ನೈಜ ವರದಿ ದಾಖಲಿಸಿಕೊಂಡಿತು.
    ಐಎಎಸ್ ಶ್ರೇಣಿಯ ಅಧಿಕಾರಿ ಸುರದೀಪ ನೇತೃತ್ವದ ಅಧಿಕಾರಿಗಳ ತಂಡ ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತ ಜಗದೀಶ ಜಾನಪ್ಪನವರ ಮತ್ತು ಪರಮೇಶಪ್ಪ ಮುಷ್ಟೂರುನಾಯ್ಕ ಅವರ ಮನೆಗೆ ಭೇಟಿ ನೀಡಿ ಸಮಗ್ರ ಮಾಹಿತಿ ಸಂಗ್ರಹಿಸಿದರು.
    ರಾಷ್ಟ್ರೀಕೃತ ಬ್ಯಾಂಕ್ ಜತೆಗೆ ಖಾಸಗಿ ಫೈನಾನ್ಸ್‌ನಲ್ಲಿ ಮಾಡಿರುವ ಸಾಲದಿಂದ ಕಿರುಕುಳ ಹೆಚ್ಚಾಗಿದೆ. ಬರಗಾಲದಿಂದಾಗಿ ಸಾಲ ತೀರಿಸಲಾಗದೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ರೈತರ ಕೃಷಿ ಸಾಲ ಮನ್ನಾ ಮಾಡಬೇಕು. ಖಾಸಗಿ ಫೈನಾನ್ಸಗಳ ಕಿರುಕುಳದಿಂದ ಮುಕ್ತ ಮಾಡಬೇಕು ಎಂದು ರೈತರ ಕುಟುಂಬದವರು ಅಧಿಕಾರಿಗಳ ಎದುರು ಅಳಲು ತೋಡಿಕೊಂಡರು.
    ಅಧಿಕಾರಿಗಳ ತಂಡದಲ್ಲಿ ಕೃಷಿ ಉಪನಿರ್ದೇಶಕ ರೇವಣಶಿದ್ದಪ್ಪ, ಕೃಷಿ ಅಧಿಕಾರಿ ಬಸವರಾಜ ಮರಗಣ್ಣನವರ, ಮೆಹಬೂಬಬಾಷಾ, ನಾಗರಾಜ ಚಳಗೇರಿ ಹಾಗೂ ರಾಜ್ಯ ರೈತ ಸಂಘದ ಸಂಘಟನಾ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts