ಮೊಬೈಲ್​ ಬಳಸದಂತೆ ಬುದ್ದಿವಾದ ಹೇಳಿದ ಪೋಷಕರು; ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

NEET Suicide
Published on

ಚಿಕ್ಕಬಳ್ಳಾಪುರ: ಹೆಚ್ಚು ಸಮಯ ಮೊಬೈಲ್​ ಬಳಸುವ ಬದಲು ವಿದ್ಯಾಭ್ಯಾಸದತ್ತ ಗಮನ ಹರಿಸು ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಒಂಬತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ನಡೆದಿದೆ.

ಗೌರಿಬಿದನೂರು ತಾಲ್ಲೂಕಿನ ಚಿತ್ತವಾಳಹಳ್ಳಿ ಗ್ರಾಮದ ನಿವಾಸಿ ಲೋಕೇಷ್​ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ವೃತ್ತಿಯಲ್ಲಿ ರೈತರಾಗಿರುವ ಲೋಕೇಶ್​ ತಂದೆ ಹೆಚ್ಚು ಫೋನ್​ ಬಳಸದಂತೆ ತಮ್ಮ ಮಗನಿಗೆ ತಾಕೀತು ಮಾಡಿದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ಮಧ್ಯಾಹ್ನ ಲೋಕೇಶ್​ ಪೋಷಕರು ಹೆಚ್ಚು ಸಮಯ ಮೊಬೈಲ್​ ಬಳಸುವ ಬದಲು ವಿದ್ಯಾಭ್ಯಾಸದತ್ತ ಗಮನ ಹರಿಸು ಎಂದು ಬುದ್ದಿವಾದ ಹೇಳಿದ್ದಾರೆ. ಇದರಿಂದ ಮನನೊಂದ ಲೋಕೇಶ್​ ತನ್ನ ಪೋಷಕರೊಂದಿಗೆ ಜಗಳವಾಡಿ ಮನೆಯಿಂದ ಹೊರಬಂದಿದ್ದಾನೆ. ಬಳಿಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net