25.7 C
Bangalore
Sunday, December 15, 2019

ಸಮಸ್ಯೆಗೆ ಪರಿಹಾರವಿದ್ದರೆ ಆತ್ಮಹತ್ಯೆ ಏಕೆ?

Latest News

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಹೊಳೆನರಸೀಪುರ: ಎಲ್ಲ ಸಮಸ್ಯೆಗಳಿಗೂ ಪರಿಹಾರವಿದೆ ಎಂದ ಮೇಲೆ ಏಕೆ ಆತ್ಮಹತೆ ಮಾಡಿಕೊಳ್ಳಬೇಕು ಎಂದು ವೃತ್ತ ನಿರೀಕ್ಷಕ ಆರ್.ಪಿ.ಅಶೋಕ್ ಪ್ರಶ್ನಿಸಿದರು.

ಪಟ್ಟಣದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಮನೋವಿಜ್ಞಾನ ವಿಭಾಗದ ವತಿಯಿಂದ ಗುರುವಾರ ಆಯೋಜಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವಿಕೆ ದಿನ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು ಹಲವು ಸಂದರ್ಭಗಳಲ್ಲಿ ಹಿಂಸೆಯನ್ನು ಸಹಿಸುವ ಮನಸ್ಥಿತಿಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆದರೆ ಕಾನೂನಿನಲ್ಲಿ ಮಹಿಳೆಯರಿಗಾಗಿ ರೂಪಿಸಿರುವ ಕೌಟುಂಬಿಕ ಹಿಂಸಾಚಾರ ಕಾಯ್ದೆಯ ಸಹಾಯದಿಂದ ಹೋರಾಡಬೇಕು. ಇದು ಇತರರಿಗೆ ಎಚ್ಚರಿಕೆಯ ಸಂದೇಶವನ್ನು ನೀಡುತ್ತದೆ. ಮಹಿಳೆಯರ ಹಕ್ಕು ಮತ್ತು ರಕ್ಷಣೆ ರೂಪಿಸಿರುವ ಕಾನೂನು ಹಾಗೂ ಕಾಯ್ದೆಯ ಬಗ್ಗೆ ವಿದ್ಯಾರ್ಥಿನಿಯರು ಹೆಚ್ಚು ಅರಿತು, ಸಮಾಜಮುಖಿ ಕಾರ್ಯಗಳನ್ನು ಮಾಡುವಂತೆ ಕೋರಿದರು.

ಮನೋವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಕೃಷ್ಣಮೂರ್ತಿ ಮಾತನಾಡಿ, ಶೈಕ್ಷಣಿಕ ವ್ಯವಸ್ಥೆ ಹಾಗೂ ಇತರ ಒತ್ತಡಗಳು ಮತ್ತು ದುರ್ಬಲ ಮನಸ್ಥಿತಿಯಿಂದ ಆತ್ಮಹತ್ಯೆಗಳು ಹೆಚ್ಚುತ್ತಿದೆ. ಆದರೆ ಒಂದು ಆತ್ಮಹತ್ಯೆಯು 135 ಜನರ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಅರಿಯಬೇಕು. ವಿಶ್ವದಲ್ಲಿ ಪ್ರತಿ 40 ಸೆಕೆಂಡಿಗೆ 1 ಆತ್ಮಹತ್ಯೆಯಾಗುತ್ತದೆ. ಪೂರ್ವ ಏಷ್ಯನ್ ರಾಷ್ಟ್ರಗಳಲ್ಲಿ ಭಾರತದಲ್ಲಿ ಶೇ.17.5 ಜನರು ಹಾಗೂ ಪ್ರತಿ ಗಂಟೆಗೆ ಒಬ್ಬ ವಿದ್ಯಾರ್ಥಿ ಸಾವನ್ನಪ್ಪುತ್ತಾರೆ. ಯುವಶಕ್ತಿಯನ್ನು ಇಂದಿನ ಶೈಕ್ಷಣಿಕ ವ್ಯವಸ್ಥೆಯು ಯಂತ್ರಗಳನ್ನಾಗಿ ಮಾಡುತ್ತಿದೆ. ಪಾಲಕರು ವಿದ್ಯಾರ್ಥಿಗಳ ಇಚ್ಛೆಯನ್ನು ಪರಿಗಣಿಸಿ, ಶೈಕ್ಷಣಿಕ ವ್ಯವಸ್ಥೆ ರೂಪಿಸುವಲ್ಲಿ ತೋರುತ್ತಿರುವ ನಿರಾಸಕ್ತಿ ಕಾರಣವಿರಬಹುದು ಎಂದು ಅಭಿಪ್ರಾಯಪಟ್ಟರು.

ದೇಶದ ರೈತರಲ್ಲಿ ಸಮಸ್ಯೆಗಳು ಸಾಮಾನ್ಯ. ಪ್ರತಿಯೊಬ್ಬ ರೈತನೂ ಸಾಲ ಮಾಡಿರುತ್ತಾನೆ. ಎಲ್ಲರೂ ಆತ್ಮಹತ್ಯೆ ಮಾಡಿಕೊಳ್ಳಲ್ಲ. ಆದರೆ ಕೆಲವರು ಮಾತ್ರ ಸಾಯುತ್ತಾರೆ. ರೈತರ ಸಾವಿಗೆ ಕಾರಣಗಳನ್ನು ಹುಡುಕಿ, ಮಾನಸಿಕ ಹಿಂಸೆಯ ವಿಚಾರಗಳನ್ನು ಸರಿಪಡಿಸಬೇಕು ಎಂದರು.

ಮಾನಸಿಕವಾಗಿ ನೊಂದಿರುವ ವ್ಯಕ್ತಿಗಳನ್ನು ಬಹು ಬೇಗ ಗುರುತಿಸಬಹುದು. ಅಂತಹ ವ್ಯಕ್ತಿಗಳಿಗೆ ಸಾಂತ್ವನದ ಮಾತುಗಳನ್ನಾಡಬೇಕು. ಅವರಲ್ಲಿ ಆತ್ಮವಿಶ್ವಾನ ಮೂಡಿಸುವ ಪ್ರಯತ್ನ ಮತ್ತು ಬದುಕಬೇಕು ಎಂಬ ಛಲ ಮೂಡುವಂತೆ ಮಾಡಬೇಕು ಎಂದು ವಿದ್ಯಾರ್ಥಿನಿಯರಲ್ಲಿ ಕೋರಿದರು.
ಪ್ರಾಂಶುಪಾಲೆ ಡಾ. ಜಯಲಕ್ಷ್ಮೀ ಮಾತನಾಡಿದರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...