ಸುಜಯ್‌ಶೆಟ್ಟಿಗೆ ಹಲವು ಪ್ರಶಸ್ತಿ

sujay
ಸುಜಯ್ ಶೆಟ್ಟಿ
Published on

ಕುಂದಾಪುರ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆ.27ರಿಂದ 31ರವರೆಗೆ ನಡೆದ ರಾಜ್ಯಮಟ್ಟದ ಎನ್‌ಎಸ್‌ಎಸ್ ಯುವಜನೋತ್ಸವದಲ್ಲಿ ಮಂಗಳೂರು ವಿಶ್ವವಿದ್ಯಾಲಯ ತಂಡ ಪ್ರತಿನಿಧಿಸಿದ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಸ್ವಯಂಸೇವಕ ಸುಜಯ್ ಶೆಟ್ಟಿ ಹಲವು ಪ್ರಶಸ್ತಿ ಪಡೆದುಕೊಂಡಿದ್ದಾರೆ. ವೈಯಕ್ತಿಕವಾಗಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ, ಗುಂಪು ಸ್ಪರ್ಧೆಯ ಪ್ರಹಸನ ಮತ್ತು ಸಮೂಹಗಾನದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 21 ವಿಶ್ವವಿದ್ಯಾಲಯಗಳು ಭಾಗವಹಿಸಿದ ಈ ಯುವಜನೋತ್ಸವ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯ ಅತಿ ಹೆಚ್ಚು ಸ್ಪರ್ಧೆಗಳಲ್ಲಿ ಗೆಲ್ಲುವ ಮೂಲಕ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net