ರಾಷ್ಟ್ರಾಭಿವೃದ್ಧಿ ಚಿಂತನೆ ಪ್ರತಿಯೊಬ್ಬನ ಕರ್ತವ್ಯ : ಶಾಸಕಿ ಭಾಗೀರಥಿ ಅಭಿಮತ

New Project (5)
Published on

ವಿಜಯವಾಣಿ ಸುದ್ದಿಜಾಲ ಸುಳ್ಯ

ಸ್ವಾತಂತ್ರ್ಯ ದಿನಾಚರಣೆ ಒಂದೇ ದಿನಕ್ಕೆ ಸೀಮಿತಗೊಳಿಸದೇ ದೇಶಕ್ಕಾಗಿ ನಾವು ಮಾಡಬೇಕಾದ ಕಾರ್ಯಗಳ ಕುರಿತು ಪ್ರತಿಯೊಬ್ಬರೂ ಯೋಚಿಸಬೇಕು. ಜತೆಗೆ ಹೋರಾಟಗಾರರ ಶ್ರಮವನ್ನು ಸ್ಮರಿಸುತ್ತಾ ಇರಬೇಕು ಎಂದು ಶಾಸಕಿ ಭಾಗಿರಥಿ ಮುರುಳ್ಯ ಅಭಿಪ್ರಾಯಪಟ್ಟರು.

ಸುಳ್ಯ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ತಾಲೂಕುಮಟ್ಟದ ಸ್ವಾತಂತ್ರ್ಯ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಹಸೀಲ್ದಾರ್ ಮಂಜುಳಾ ಎಂ. ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ತಾಲೂಕು ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಮೊಟ್ಟೆ, ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಂ.ಮುಸ್ತಫಾ, ಸರ್ಕಲ್ ಇನ್‌ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ,

ನಗರ ಪಂಚಾಯಿತಿ ಮುಖ್ಯಾಧಿಕಾರಿ ಬಸವರಾಜ್, ಪ್ರಾಂಶುಪಾಲ ಮೋಹನ್ ಗೌಡ ಬೊಮ್ಮೆಟ್ಟಿ, ಪ್ರಮುಖರಾದ ಬುದ್ಧ ನಾಯ್ಕ, ಡಾ.ಕೆ.ವಿ.ಚಿದಾನಂದ, ವಿನಯಕುಮಾರ್ ಕಂದಡ್ಕ, ಎಂ.ವೆಂಕಪ್ಪ ಗೌಡ, ಕೆ.ಎಸ್.ಉಮ್ಮರ್, ಶೀಲಾ ಅರುಣ ಕುರುಂಜಿ, ಶೀಲ್ಪಾ ಸುದೇವ್, ಸುಶೀಲಾ ಜಿನ್ನಪ್ಪ, ಸುಧಾಕರ ಕೇರ್ಪಳ, ಧೀರಾ ಕ್ರಾಸ್ತಾ, ನಾರಾಯಣ, ರಾಜು ಪಂಡಿತ್, ಸಿದ್ದಿಕ್ ಕೊಕ್ಕೊ ಉಪಸ್ಥಿತರಿದ್ದರು.

ತಾಲೂಕು ಪಂಚಾಯಿತಿ ಇಒ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ. ವಂದಿಸಿದರು. ಚಂದ್ರಮತಿ.ಕೆ ಕಾರ್ಯಕ್ರಮ ನಿರೂಪಿಸಿದರು.

ಸನ್ಮಾನ, ಆಕರ್ಷಕ ಪಥಸಂಚಲನ

ನಿವತ್ತ ಸೈನಿಕರನ್ನು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮೊದಲು ಆಕರ್ಷಕ ಪಥಸಂಚಲನ ನಡೆಯಿತು. ಪೊಲೀಸ್, ಮಾಜಿ ಸೈನಿಕರ ಸಂ, ಗಹರಕ್ಷಕ ದಳ, ಎನ್‌ಸಿಸಿ, ಸ್ಕೌಟ್ಸ್ - ಗೈಡ್ಸ್, ಬುಲ್‌ಬುಲ್ ತಂಡಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net