ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಸಭೆ : ಸುಜ್ಞಾನ ನಿಧಿ ಶಿಕ್ಷಕರ ಮಂಜೂರಾತಿ ಪತ್ರಗಳ ವಿತರಣೆ

New Project (5)
Published on

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಪದಾಧಿಕಾರಿಗಳ ಸಭೆ ಮತ್ತು ಸುಜ್ಞಾನ ನಿಧಿ ಶಿಷ್ಯವೇತನ ಹಾಗೂ ಜ್ಞಾನದೀಪ ಶಿಕ್ಷಕರ ಮಂಜೂರಾತಿ ಪತ್ರಗಳ ವಿತರಣಾ ಕಾರ್ಯಕ್ರಮ ಯೋಜನಾ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ. ಮುಖ್ಯ ಅತಿಥಿಯಾಗಿದ್ದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷ ಲೋಕನಾಥ್ ಅಮೆಚೂರು ಅಧ್ಯಕ್ಷತೆ ವಹಿಸಿದ್ದರು.

ಪ್ರಗತಿಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ, ವಿಮಲಾ ರಂಗಯ್ಯ, ವಿಶ್ವನಾಥ ರೈ ಕಳಂಜ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಉಪಸ್ಥಿತರಿದ್ದರು. ಗ್ರಾಮಾಭಿವೃದ್ಧಿ ಯೋಜನೆ ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net