ಸುಳ್ಯ ಶಾಸಕಿಯಿಂದ ಹಾನಿ ಪರಿಶೀಲನೆ

bheti
ಎಡಮಂಗಲ ಸೇತುವೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವೀಕ್ಷಿಸಿದರು. ಗ್ರಾ.ಪಂ ಅಧ್ಯಕ್ಷ ರಾಮಣ್ಣ ಉಪಸ್ಥಿತರಿದ್ದರು.
Published on

ಸುಬ್ರಹ್ಮಣ್ಯ: ಎಡಮಂಗಲ ಗ್ರಾಮದಲ್ಲಿ ವಿವಿಧ ಕಡೆ ಮಳೆಯಿಂದ ಹಾನಿಯಾಗಿರುವ ಸ್ಥಳಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ಪರಿಶೀಲಿಸಿದರು. ಎಡಮಂಗಲ ಗ್ರಾಪಂ ಅಧ್ಯಕ್ಷ ರಾಮಣ್ಣ ಮೊದಲಾದವರು ಉಪಸ್ಥಿತರಿದ್ದರು.

ನಿಂತಿಕಲ್ಲು ಎಡಮಂಗಲ-ಪುಳಿಕುಕ್ಕು ಸಂಪರ್ಕ ಲೋಕೋಪಯೋಗಿ ರಸ್ತೆಯ ಕಡಬ ತಾಲೂಕಿನ ಎಡಮಂಗಲ ಸಮೀಪದ ಮಾಲೆಂಗಿರಿ ಎಂಬಲ್ಲಿ ಸೇತುವೆ ಅಡಿ ಭಾಗ ಭಾರಿ ಮಳೆಗೆ ಕುಸಿದಿದೆ. ಪರಿಣಾಮ ಸೇತುವೆ ಸಂಚಾರಕ್ಕೆ ಯೋಗ್ಯವಲ್ಲದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧಿಸಲಾಗಿತ್ತು. ಸ್ಥಳ ಪರಿಶೀಲನೆ ಮಾಡಿದ ಶಾಸಕಿ, ಶೀಘ್ರವೇ ಇಲ್ಲಿ ಸರ್ವಋತು ಸೇತುವೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಎಡಮಂಗಲದಿಂದ ಮಳೆ ಹಾನಿಗೆ ತುತ್ತಾದ ಮನೆಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರದ ವ್ಯವಸ್ಥೆ ಬಗ್ಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net