25.5 C
Bangalore
Monday, December 16, 2019

ಸುಳ್ಯ-ನಾರ್ಕೋಡು-ಕೋಲ್ಚಾರ್-ಬಂದಡ್ಕ ಅಂತಾರಾಜ್ಯ ರಸ್ತೆ ಅಭಿವೃದ್ಧಿಗೆ ಅನುದಾನ

Latest News

ರಾಜರಾಜೇಶ್ವರಿ ನಗರದ ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ನಾಯಕರ ಬೆನ್ನುಹತ್ತಿರುವ ಅನರ್ಹ ಶಾಸಕ ಮುನಿರತ್ನ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಸಮಸ್ಯೆ ಬಗೆ ಹರಿಸಿ ಶೀಘ್ರವೇ ಉಪ ಚುನಾವಣೆ ನಡೆಯುವಂತೆ ಮಾಡಬೇಕು ಎಂದು ಅನರ್ಹ ಶಾಸಕ ಮುನಿರತ್ನ...

ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ವಿರುದ್ಧ ಕೋಲ್ಕತ್ತದಲ್ಲಿ ಬೃಹತ್​ ರ‍್ಯಾಲಿ; ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವ

ಕೋಲ್ಕತ್ತ: ಪೌರತ್ವ ತಿದ್ದುಪಡಿ ಕಾಯ್ದೆ ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಕಿಡಿ ಹೊತ್ತಿಸಿದೆ. ದೇಶದ ಈಶಾನ್ಯ ಭಾಗದಲ್ಲಿ ಪ್ರಾರಂಭವಾದ ಪ್ರತಿಭಟನೆ ಈಗ ದೆಹಲಿ, ಉತ್ತರ ಪ್ರದೇಶ...

ಮುಸ್ಲಿಂರಿಂದ ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನದಾನ

* ಸಾಮರಸ್ಯಕ್ಕೆ ಮುನ್ನುಡಿ ಬರೆದ ಕಾರ್ಯಕ್ರಮವಿಜಯವಾಣಿ ಸುದ್ದಿಜಾಲ ಬಳ್ಳಾರಿನಗರದ ಹೊಸಪೇಟೆ ರಸ್ತೆಯಲ್ಲಿರುವ ಏಳು ಮಕ್ಕಳ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ಸೋಮವಾರ ಮುಸ್ಲಿಂರು ಊಟ...

ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಎದೆಗೆ ನಾಟಿದ್ದ ಕಬ್ಬಿಣ ರಾಡ್​ ಹೊರತೆಗೆದ ವೈದ್ಯರು: ಪ್ರಾಣಾಪಾಯದಿಂದ ವ್ಯಕ್ತಿ ಪಾರು

ರಾಯಚೂರು: ಎದೆಗೆ ಕಬ್ಬಿಣದ ರಾಡ್ ತೂರಿದ್ದ ವ್ಯಕ್ತಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯ ವೈದ್ಯರು ಸತತ ಒಂದೂವರೆ ತಾಸು ಶಸ್ತ್ರಚಿಕಿತ್ಸೆ ನಡೆಸಿ ಪ್ರಾಣಾಪಾಯದಿಂದ ಪಾರು...

ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ

ಕೊಡಗು: ಹಿಂದು ರಾಷ್ಟ್ರದಲ್ಲಿ ಹಿಂದುಗಳ ಮೇಲೆ ದೌರ್ಜನ್ಯ ಮಿತಿಮೀರಿದೆ ಎಂದು ವಕೀಲ ಪಿ. ಕೃಷ್ಣಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಹಿಂದು ಜನಜಾಗೃತಿ ಸಮಿತಿಯಿಂದ ಕುಶಾಲನಗರದ ಗಾಯತ್ರಿ ಕಲ್ಯಾಣ...

ಗಂಗಾಧರ ಕಲ್ಲಪಳ್ಳಿ ಸುಳ್ಯ
ಒಟ್ಟು 12.16 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಪೂರ್ತಿಗೊಂಡಿದ್ದು, ಮಳೆ ನಿಂತ ಕೂಡಲೇ ಕೆಲಸ ಆರಂಭವಾಗಲಿದೆ. ನಾರ್ಕೋಡಿನಿಂದ ಕೇರಳದ ಗಡಿ ಕನ್ನಡಿತೋಡುವರೆಗೆ ಲೋಕೋಪಯೋಗಿ ಇಲಾಖೆಯ ರಸ್ತೆಗೆ ಅನುದಾನ ಬಿಡುಗಡೆಯಾಗಿದ್ದು ಅಭಿವೃದ್ಧಿ ಕಾಣಲಿದೆ. ನಾರ್ಕೋಡಿನಿಂದ ಒಂದೂವರೆ ಕಿ.ಮೀ. ರಸ್ತೆ 75 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳ್ಳಲಿದೆ. ಬಜೆಟ್ ಅನುದಾನ 75 ಲಕ್ಷ ರೂ. ಮೀಸಲಿರಿಸಲಾಗಿದ್ದು 5.5 ಮೀಟರ್ ಅಗಲದಲ್ಲಿ ರಸ್ತೆ ಅಭಿವೃದ್ಧಿಯಾಗಲಿದೆ. 1.5 ಕಿ.ಮೀ.ನಿಂದ 10.65 ಕಿ.ಮೀ.ವರೆಗೆ ಅಂದರೆ ಕೇರಳ-ಕರ್ನಾಟಕ ಗಡಿ ಕನ್ನಡಿತೋಡುವರೆಗೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಲ್ಲಿ(ಎಸ್‌ಎಚ್‌ಡಿಪಿ) 10.50 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.
ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕಿಗೆ ಎಸ್‌ಎಚ್‌ಡಿಪಿ ಯೋಜನೆಯಡಿ ಒಟ್ಟು 47.5 ಕೋಟಿ ರೂ. ಪ್ಯಾಕೇಜ್ ಬಿಡುಗಡೆಯಾಗಿದ್ದು, ಇದರಲ್ಲಿ 10.50 ಕೋಟಿ ರೂ. ಬಂದಡ್ಕ ರಸ್ತೆಗೆ ಮೀಸಲಿರಿಸಲಾಗಿದೆ ಎಂದು ಸುಳ್ಯ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ ತಿಳಿಸಿದ್ದಾರೆ. ಬಾರ್ಪಣೆ ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ನಬಾರ್ಡ್ ಯೋಜನೆಯಲ್ಲಿ 91 ಲಕ್ಷ ರೂ. ಬಿಡುಗಡೆ ಆಗಿ ಟೆಂಡರ್ ನಡೆದಿದೆ. ಅಂದರೆ ನಾರ್ಕೋಡಿನಿಂದ ಕನ್ನಡಿತೋಡುವರೆಗೆ ಒಟ್ಟು 12.16 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ರಸ್ತೆ ಸಂಪೂರ್ಣ ಅಭಿವೃದ್ಧಿ ಕಾಣಲಿದೆ.

- Advertisement -

16 ರಸ್ತೆಗಳು ಮೇಲ್ದರ್ಜೆ ಪ್ರಸ್ತಾವನೆ: ಸುಳ್ಯ ತಾಲೂಕಿನ 16 ಗ್ರಾಮೀಣ ರಸ್ತೆಗಳನ್ನು ಜಿಲ್ಲಾ ಮುಖ್ಯ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರ ಮಾಡಬೇಕು ಎಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸುಳ್ಯ ತಾಲೂಕಿನಲ್ಲಿ ಬಹುತೇಕ ರಸ್ತೆಗಳು ಗ್ರಾಮೀಣ ರಸ್ತೆಗಳಾಗಿದ್ದು ಜಿಲ್ಲಾ ಪಂಚಾಯಿತಿ ಅಧೀನದಲ್ಲಿದೆ. ಈ ರಸ್ತೆಗಳಿಗೆ ಅನುದಾನದ ಕೊರತೆ ಇರುವುದರಿಂದ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರಮುಖ 16 ರಸ್ತೆಗಳನ್ನು ಆಯ್ಕೆ ಮಾಡಿ 157.70 ಕಿ.ಮೀ. ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯಾಗಿ ಮೇಲ್ದರ್ಜೆಗೇರಿಸಬೇಕು ಎಂದು ಶಾಸಕ ಎಸ್.ಅಂಗಾರ ನಿರ್ದೇಶನದ ಮೇರೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮೇಲ್ದರ್ಜೆಗೇರಿದರೆ ಈ ರಸ್ತೆಗಳಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ಬರಲಿದೆ.

ಯಾವುದೆಲ್ಲ ರಸ್ತೆಗಳು ಮೇಲ್ದರ್ಜೆಗೆ?: ಸುಳ್ಯ ತಾಲೂಕಿನ ಮಲಯಾಳ- ಹರಿಹರ- ಕೊಲ್ಲಮೊಗ್ರ-ಕಲ್ಮಕ್ಕಾರು ರಸ್ತೆ(18.15 ಕಿ.ಮೀ.), ದೊಡ್ಡತೋಟ-ಕುಕ್ಕುಜಡ್ಕ-ಪಾಜಪಳ್ಳ ರಸ್ತೆ(15.95), ಸೇವಾಜೆ-ಮಡಪ್ಪಾಡಿ-ಕಂದ್ರಪ್ಪಾಡಿ-ಗುತ್ತಿಗಾರು ರಸ್ತೆ(13.30), ದೊಡ್ಡತೋಟ-ಬೊಮ್ಮಾರು-ಮರ್ಕಂಜ ರಸ್ತೆ(12.10), ಆಲೆಟ್ಟಿ-ಬಡ್ಡಡ್ಕ-ಕೂರ್ನಡ್ಕ ರಸ್ತೆ(11.90), ನಡುಗಲ್ಲು-ಹರಿಹರ ಪಳ್ಳತ್ತಡ್ಕ-ಬಾಳುಗೋಡು (11.00), ಗುತ್ತಿಗಾರು-ಬಳ್ಳಡ್ಕ-ಪಂಜ(10.20), ಕಾಂತಮಂಗಲ-ಅಜ್ಜಾವರ-ಮಂಡೆಕೋಲು-ಕನ್ಯಾನ(10.00), ಅಡ್ಡಬೈಲು-ಬೀದಿಗುಡ್ಡೆ-ಬೋಗಾಯನಕೆರೆ ರಸ್ತೆ (9.80), ಪುಳಿಕುಕ್ಕು-ಎಡಮಂಗಲ-ಅಲೆಕ್ಕಾಡಿ(8.60), ಅಜ್ಜನಗದ್ದೆ-ಕುಕ್ಕುಜಡ್ಕ-ಪೈಲಾರು-ಜಬಳೆ ರಸ್ತೆ (8.10), ಅರಂತೋಡು- ತೊಡಿಕಾನ- ದೊಡ್ಡಕುಮೇರಿ ರಸ್ತೆ(8.00), ಬೊಬ್ಬೆಕೇರಿ-ಅಯ್ಯನಕಟ್ಟೆ ರಸ್ತೆ(7.00), ಗುತ್ತಿಗಾರು-ಕಮಿಲ-ಬಳ್ಪ ರಸ್ತೆ(5.40), ಅಜ್ಜಾವರ-ನಾರ್ಕೋಡು ರಸ್ತೆ (4.70), ಐವರ್ನಾಡು-ಪಾಲೆಪ್ಪಾಡಿ-ಪಾಂಬಾರು-ಕೊಳ್ತಿಗೆ ರಸ್ತೆಗಳನ್ನು ಮೇಲ್ದರ್ಜೆಗೇರಿಸಬೇಕೆಂಬ ಪ್ರಸ್ತಾವನೆ ಸಲ್ಲಿಸಲಾಗಿದೆ.

ಗ್ರಾಮೀಣ ರಸ್ತೆ ಸ್ಥಿತಿ ಅಯೋಮಯ: ಸುಳ್ಯ ತಾಲೂಕಿನಲ್ಲಿ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ವಿಭಾಗ ವ್ಯಾಪ್ತಿಯಲ್ಲಿ ಒಟ್ಟು 1,340 ಕಿ.ಮೀ ಗ್ರಾಮೀಣ ರಸ್ತೆಗಳಿವೆ. 1110 ರಸ್ತೆಗಳಿದ್ದು ಅದರಲ್ಲಿ 16 ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯಿದೆ. 1340 ಕಿ.ಮೀ.ನಲ್ಲಿ 660 ಕಿ.ಮೀ. ಡಾಂಬರು ಮತ್ತು 20 ಕಿ.ಮೀ. ಕಾಂಕ್ರೀಟ್ ರಸ್ತೆಗಳಿವೆ. ಉಳಿದವು ಕಚ್ಚಾ ರಸ್ತೆಗಳು. ಡಾಂಬರು ರಸ್ತೆಗಳೆಲ್ಲವೂ 15-20 ವರ್ಷಗಳ ಹಿಂದೆ ಡಾಂಬರು ಕಂಡ ರಸ್ತೆಗಳು. ಈಗ ಡಾಂಬರು ಎದ್ದು ಹೋಗಿ ಸಂಚಾರ ಕಷ್ಟವಾಗಿದೆ. ಹೊಸ ರಸ್ತೆಗಳ ನಿರ್ಮಾಣಕ್ಕೆ ಅನುದಾನ ಬರುತ್ತಿಲ್ಲ. ಮಳೆ ಹಾನಿ ಮತ್ತಿತರ ಯೋಜನೆಯಲ್ಲಿ ಅಲ್ಪ ಸ್ವಲ್ಪ ಅನುದಾನ ಬಂದರೂ ಅದು ನಿರ್ವಹಣೆಗೆ ಸಾಕಾಗುತ್ತಿಲ್ಲ.

ಸುಳ್ಯ ತಾಲೂಕಿನ 16 ರಸ್ತೆಗಳನ್ನು ಮೇಲ್ದರ್ಜೆಗೇರಿಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲಾ ಮುಖ್ಯ ರಸ್ತೆಯಾಗಿ ಮೇಲ್ದರ್ಜೆಗೇರಿದರೆ ಈ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬರಲಿದೆ.

ಎಸ್.ಅಂಗಾರ, ಶಾಸಕರು ಸುಳ್ಯ

Stay connected

278,752FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...