22.5 C
Bengaluru
Sunday, January 19, 2020

ಉಪಚುನಾವಣೆ ಮತದಾನಕ್ಕೂ ಮುನ್ನವೇ ಮತದಾರರಿಗೆ ಸಂದೇಶ ರವಾನಿಸಿದ ಸಂಸದೆ ಸುಮಲತಾ!

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ಬೆಂಗಳೂರು: ಮಂಡ್ಯದ ಕೆ.ಆರ್​.ಪೇಟೆ ಉಪಚುನಾವಣೆಯ ಚುನಾವಣಾ ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದ ನಟಿ ಹಾಗೂ ಸಂಸದೆ ಸುಮಲತಾ ಅವರು ನಾಳೆ ನಡೆಯಲಿರುವ ಉಪಚುನಾವಣೆಯ ಮತದಾನದ ಬಗ್ಗೆ ತಮ್ಮ ಫೇಸ್​ಬುಕ್​ ಪೇಜ್​ ಮೂಲಕ ಜನರಿಗೆ ಸಂದೇಶ ರವಾನಿಸಿದ್ದಾರೆ.

ಸುಮಲತಾ ಅವರ ಫೇಸ್​ಬುಕ್​ ಪೋಸ್ಟ್​ ಹೀಗಿದೆ….
ಕಳೆದ ಕೆಲವು ತಿಂಗಳಿನಿಂದ ಮಾಧ್ಯಮ ಮತ್ತಿತರ ಕಡೆಗಳಲ್ಲಿ ನಾನು ಉಪಚುನಾವಣೆಯಲ್ಲಿ ಯಾರಿಗೆ ಬೆಂಬಲ ಸೂಚಿಸುತ್ತೇನೆ ಎಂಬ ಚರ್ಚೆಗಳು ನಡೆಯುತ್ತಿವೆ. ನನ್ನ ಪ್ರಕಾರ ಮಂಡ್ಯ ಜಿಲ್ಲೆಯ ಮತದಾರರು ಅತ್ಯಂತ ಸೂಕ್ಷ್ಮಮತಿಗಳು ಮತ್ತು ಬುದ್ಧಿವಂತರಾಗಿದ್ದು, ಉತ್ತಮ ಅಭ್ಯರ್ಥಿ ಯಾರು ಎಂದು ತಿಳಿದುಕೊಂಡಿದ್ದಾರೆ. ಅದನ್ನು ಕಳೆದ ಚುನಾವಣೆಯಲ್ಲಿ ಸಾಬೀತು ಮಾಡಿದ್ದಾರೆ. ಆದ್ದರಿಂದ ಪ್ರಾಮಾಣಿಕ ಮತ್ತು ಸಮರ್ಥವಾಗಿ ಕಾರ್ಯ ನಿರ್ವಹಿಸುವ ಶಾಸಕರನ್ನು ಆಯ್ಕೆ ಮಾಡಿ ಎಂದು ಸುಮಲತಾ ಅವರು ಮತದಾರರಲ್ಲಿ ಮನವಿ ಮಾಡಿದ್ದಾರೆ.

ಮತದಾನ ನಮ್ಮ ಜನ್ಮಸಿದ್ಧ ಹಕ್ಕು. ನಮ್ಮ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಹಕ್ಕಿಗಾಗಿ ಹಲವಾರು ಮಂದಿ ಹೋರಾಡಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಹೀಗಾಗಿ ನಮ್ಮ ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಲುವಾಗಿ ಜವಾಬ್ದಾರಿಯುತವಾಗಿ ಮತದಾನ ಮಾಡುವ ಮೂಲಕ ಜವಾಬ್ದಾರಿಯುತ, ಸಮರ್ಥ ಹಾಗೂ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುವ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಂದಿದ್ದಾರೆ.

ಉತ್ತಮ ನಾಳೆಗಾಗಿ ಇಂದು ನಿಮ್ಮ ಮತ ಚಲಾಯಿಸಿ. ಸಮಾಜ ಬೆಳವಣಿಗೆಗೆ ಮತ ಚಲಾಯಿಸಿ, ಅಭಿವೃದ್ಧಿಗಾಗಿ ಮತ ಚಲಾಯಿಸಿ, ಉತ್ತಮ ವ್ಯಕ್ತಿಗಳಿಗಾಗಿ ಮತ ಚಲಾಯಿಸಿ, ನಮ್ಮ ಪ್ರಜಾಪ್ರಭುತ್ವಕ್ಕಾಗಿ ಮತ ಚಲಾಯಿಸಿ ಎಂದು ಹೇಳುವ ಮೂಲಕ ನಾಳಿನ ಮತದಾನಕ್ಕೂ ಮುಂಚೆ ಮತದಾರರಿಗೆ ಕರೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

ಕಳೆದ ಕೆಲವು ತಿಂಗಳಿನಿಂದ ಮಾಧ್ಯಮ ಮತ್ತಿತರ ಕಡೆಗಳಲ್ಲಿ ನಾನು ಉಪಚುನಾವಣೆಯಲ್ಲಿ ಯಾರಿಗೆ ಬೆಂಬಲ ಸೂಚಿಸುತ್ತೇನೆ ಎಂಬ ಚರ್ಚೆಗಳು…

Sumalatha Ambareesh ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಬುಧವಾರ, ಡಿಸೆಂಬರ್ 4, 2019

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...