ಚುನಾವಣಾ ಕಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ವದಂತಿ ಬಗ್ಗೆ ಸುಮಲತಾ ಅಂಬರೀಷ್ ಹೇಳಿದ್ದೇನು?

ಮಂಡ್ಯ: ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದಾರೆ ಎಂಬ ವದಂತಿ ಹಿನ್ನೆಲೆಯಲ್ಲಿ ನಟಿ ಸುಮಲತಾ ಅಂಬರೀಷ್​ ಅವರು ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯ ಮೂಲಕ ಮಂಡ್ಯ ಜನತೆಗೆ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯ ಜನರಲ್ಲಿ ನನ್ನದೊಂದು ಮನವಿ. ಮಂಡ್ಯ ಜನರ ಋಣ ತೀರಿಸಲು ನಾನು ಬದ್ಧಳಾಗಿರುವೆ. ಜನರ ದಿಕ್ಕು ತಪ್ಪಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರ ನಡೆಸಿವೆ. ಇನ್ಮುಂದೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ. ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ ಹಾಗೂ ಬೆಂಬಲಗಳೇ ನಮಗೆ ಶ್ರೀರಕ್ಷೆ ಎಂದು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

ಸುಮಲತಾ ಟೆಂಪಲ್ ರನ್
ನಟಿ ಸುಮಲತಾ ಅಂಬರೀಷ್​ ಅವರು ಶ್ರೀರಂಗಪಟ್ಟಣದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದರು. ಈ ವೇಳೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸುಮಲತಾ ಅವರಿಗೆ ಸ್ಥಳೀಯ ಕಾಂಗ್ರೆಸ್​ ನಾಯಕರು ಸಾಥ್​ ನೀಡಿದರು. (ದಿಗ್ವಿಜಯ ನ್ಯೂಸ್​)