ಒಬ್ಬಂಟಿ ಮಾಡೋ ಯತ್ನ

Latest News

ಮೊಬೈಲ್‌ನಿಂದಾಗಿ ಪುಸ್ತಕ ಓದುವವರ ಸಂಖ್ಯೆ ಕ್ಷೀಣ

ಮೈಸೂರು: ಮೊಬೈಲ್ ಮತ್ತು ಕಂಪ್ಯೂಟರ್ ಬಳಕೆಯಿಂದ ಪುಸ್ತಕವನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಮೇಯರ್ ಪುಷ್ಪಲತಾ ಜಗನ್ನಾಥ್ ಬೇಸರ ವ್ಯಕ್ತಪಡಿಸಿದರು. ಸಾರ್ವಜನಿಕ ಗ್ರಂಥಾಲಯ ಇಲಾಖೆ...

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿಷೇಧದ ಅರಿವು

ಮೈಸೂರು: ಸ್ವಚ್ಛ ಸರ್ವೇಕ್ಷಣಾ-2020ರ ಸರ್ವೇ ಕಾರ್ಯದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಮರ್ಪಕ ನಿರ್ವಹಣೆ ಗಣನೀಯ ಅಂಶವಾಗಿದ್ದು, ಪರಿಸರ ಮಾಲಿನ್ಯ ತಡೆಗಟ್ಟಲು ಪ್ಲಾಸ್ಟಿಕ್ ನಿಷೇಧ ಅವಶ್ಯಕವಾಗಿದೆ. ಈ...

ಭಾಷೆ ಗೌರವಿಸದಿರುವುದು ರಾಷ್ಟ್ರವನ್ನು ಅವಮಾನಿಸಿದಂತೆ

ಮೈಸೂರು: ಪ್ರಜಾತಂತ್ರ ವ್ಯವಸ್ಥೆಯಲ್ಲಿ ಜನತೆ ಹಾಗೂ ಜನರ ಭಾಷೆಗೆ ಗೌರವ ನೀಡದಿರುವುದು ರಾಷ್ಟ್ರಕ್ಕೆ ಅಪಮಾನ ಮಾಡಿದಂತೆ ಎಂದು ಚಿಂತಕ ಪ್ರೊ.ಕಾಳೇಗೌಡ ನಾಗವಾರ ಹೇಳಿದರು. ಭಾಷಾ...

ಮೈಸೂರು: ನಗರದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಎಲ್ಲೆಡೆ ಮಕ್ಕಳ ಕಲರವ, ಚಿಲಿಪಿಲಿ ಮೇಳೈಸಿತ್ತು. ಶಾಲಾ ಚೌಕಟ್ಟಿನಿಂದ ಹೊರ ಬಂದ ಮಕ್ಕಳು ಇಲ್ಲಿ ಕುಣಿದು ಕುಪ್ಪಳಿಸಿದರು,...

ಪ್ರತಿ ಎಕರೆ ಭೂಮಿಗೆ ರೂ.5ಲಕ್ಷ ಪರಿಹಾರ

ಜಾವಗಲ್: ಬಯಲು ಸೀಮೆ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಭೂಮಿ ನೀಡುವ ಭಾಗದ ರೈತರಿಗೆ ಪ್ರತಿ ಎಕರೆಗೆ 5...

ಬೆಂಗಳೂರು: ಹೈವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಟಿ ಸುಮಲತಾ ಅಂಬರೀಷ್ ಬೆಂಬಲಕ್ಕೆ ನಿಂತಿರುವ ಪಕ್ಷದ ನಾಯಕರನ್ನು ಪ್ರಚಾರದಿಂದ ದೂರ ಮಾಡಲು ಕಾಂಗ್ರೆಸ್ ರಾಜ್ಯ ಮುಖಂಡರು ಯಶಸ್ವಿಯಾಗುವ ಹಂತದಲ್ಲಿದ್ದಾರೆ.

ಮೈತ್ರಿಧರ್ಮದಂತೆ ನಡೆಯುವ ದೃಢ ನಿರ್ಧಾರ ಕೈಗೊಂಡಿರುವ ಪರಿಣಾಮ ಜೆಡಿಎಸ್​ಗೆ ಬಿಟ್ಟುಕೊಟ್ಟಿರುವ ಕ್ಷೇತ್ರಗಳಲ್ಲಿನ ಅಸಮಾಧಾನ ಶಮನ ಮಾಡುವ ಕಾಂಗ್ರೆಸ್ ಪ್ರಯತ್ನ ನಿರಂತರವಾಗಿ ನಡೆದಿದೆ. ಅದರಲ್ಲೂ ದೇವೇಗೌಡರ ಮೂರನೇ ತಲೆಮಾರು ಸ್ಪರ್ಧಿಸುತ್ತಿರುವ ಮಂಡ್ಯ, ಹಾಸನ ಕ್ಷೇತ್ರವನ್ನು ಕಾಂಗ್ರೆಸ್ ಗಂಭೀರವಾಗಿ ತೆಗೆದುಕೊಂಡಿದೆ. ಮಂಡ್ಯ ಜಿಲ್ಲೆಯಲ್ಲಿ ಸಿಎಂ ಕುಮಾರಸ್ವಾಮಿ ಕಟ್ಟಾ ವಿರೋಧಿಗಳಾದ ಕಾಂಗ್ರೆಸ್ ಮುಖಂಡರು ಸುಮಲತಾ ಬೆಂಬಲಕ್ಕೆ ನಿಂತಿದ್ದರು. ಅಂತಹ ಎಲ್ಲರನ್ನೂ ಸಮಾಧಾನಿಸುವ ಪ್ರಯತ್ನ ನಡೆದಿದ್ದು, ಮೈತ್ರಿ ಅನಿವಾರ್ಯತೆಯನ್ನು ಸ್ಥಳೀಯ ಮುಖಂಡರಿಗೆ ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾಡುತ್ತಿದ್ದಾರೆ. ಪ್ರತಿನಿತ್ಯ ಒಂದು ಅಥವಾ ಎರಡು ಜಿಲ್ಲೆಯ ಮುಖಂಡರನ್ನು ಕರೆದು ಚರ್ಚೆ ನಡೆಸಿದ್ದಾರೆ. ಜೆಡಿಎಸ್ ಅಭ್ಯರ್ಥಿಗಳ ಪರ ಕೆಲಸ ಮಾಡದಿದ್ದರೆ, ನಮಗೂ ಕೆಲ ಕ್ಷೇತ್ರಗಳಲ್ಲಿ ಸಮಸ್ಯೆ ಆಗಬಹುದೆಂಬ ಉದ್ದೇಶದಿಂದ ಅಸಮಾಧಾನ ಶಮನಕ್ಕೆ ಕಾಂಗ್ರೆಸ್ ಮುಂದಾಗಿದೆ.

ಮಂಡ್ಯಕ್ಕೆ ವಿಶೇಷ ಒತ್ತು: ಮಂಡ್ಯದಲ್ಲಿ ಕೆಲವರು ಹಠಕ್ಕೆ ಬಿದ್ದವರಂತೆ ವರ್ತಿಸುತ್ತಿದ್ದಾರೆ. ಕೆಲವರು ಸುಮ್ಮನಾಗಿದ್ದರೂ ಇನ್ನೂ ಕೆಲವರು ಸುಮಲತಾ ಪರ ಕೆಲಸ ಮಾಡುತ್ತಿದ್ದಾರೆ. ಪಕ್ಷದ ಸೂಚನೆ ಕಡೆಗಣಿಸಿದವರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಸಮನ್ವಯ ಸಾಧಿಸುವ ಉದ್ದೇಶದಿಂದ ಹಿರಿಯ ಮುಖಂಡರೊಬ್ಬರನ್ನು ಉಸ್ತುವಾರಿಗೆ ನೇಮಕ ಮಾಡಲಾಗುತ್ತದೆ. ಅವರು ಜಿಲ್ಲೆಯಲ್ಲಿಯೇ ಇದ್ದು ಎರಡು ಪಕ್ಷದ ನಡುವೆ ಸಮನ್ವಯ ಸಾಧಿಸುವ ಕೆಲಸ ಮಾಡಲಿದ್ದಾರೆ. ಆ ಮೂಲಕ ಸುಮಲತಾರನ್ನು ಒಂಟಿ ಮಾಡುವ ಜೆಡಿಎಸ್​ನ ಪ್ರಯತ್ನಕ್ಕೆ ಕಾಂಗ್ರೆಸ್ ಸಾಥ್ ನೀಡುತ್ತಿದೆ. ಇದರಲ್ಲಿ ಎಷ್ಟರಮಟ್ಟಿಗೆ ಯಶಸ್ವಿಯಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಜೆಡಿಎಸ್ ಕ್ಷೇತ್ರಗಳಿಗೆ ಒತ್ತು

ಜೆಡಿಎಸ್​ಗೆ ಬಿಟ್ಟುಕೊಟ್ಟಿರುವ ಕ್ಷೇತ್ರಗಳ ಪೈಕಿ ಮಂಡ್ಯ, ಚಿಕ್ಕಮಗಳೂರು- ಉಡುಪಿ, ತುಮಕೂರು, ಹಾಸನ, ಉತ್ತರ ಕನ್ನಡ ಹಾಗೂ ವಿಜಯಪುರದ ಕಾಂಗ್ರೆಸ್ ಮುಖಂಡರಲ್ಲಿ ಅಸಮಾಧಾನ ಹೆಚ್ಚಿದೆ. ಆ ಮುಖಂಡರನ್ನು ಮೊದಲ ಹಂತದಲ್ಲಿ ಕರೆದು ಚರ್ಚೆ ನಡೆಸಿದ್ದಾರೆ. ಬಹುತೇಕ ಕಡೆಗಳಲ್ಲಿ ಅಸಮಾಧಾನ ಕಡಿಮೆಯಾಗುತ್ತಿದೆ.

ಸುಮಲತಾ ಅಂಬರೀಷ್ ಭಾವುಕ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಸೆಡ್ಡು ಹೊಡೆದು, ಸಿಎಂ ಪುತ್ರನ ವಿರುದ್ಧ ಕಣಕ್ಕಿಳಿಯಲು ಸಜ್ಜಾಗಿರುವ ಸುಮಲತಾ ಮಂಗಳವಾರ ಪತಿ ಅಂಬರೀಷ್ ಸಮಾಧಿ ಮುಂದೆ ಕಣ್ಣೀರಾದರು. ಬುಧವಾರ ಬೆಳಗ್ಗೆ ಮಂಡ್ಯದಲ್ಲಿ ಅವರು ನಾಮಪತ್ರ ಸಲ್ಲಿಸುತ್ತಿದ್ದು, ಮಂಗಳವಾರ ಕಂಠೀರವ ಸ್ಟುಡಿಯೋಗೆ ಆಗಮಿಸಿ ಅಂಬರೀಷ್ ಸಮಾಧಿ ಮುಂದೆ ನಾಮಪತ್ರದ ಪ್ರತಿಯನ್ನಿಟ್ಟು ಪೂಜೆ ಸಲ್ಲಿಸಿದರು. ತಿರುಪತಿಗೆ ತೆರಳಿ ತಿಮ್ಮಪ್ಪನಿಗೆ ಪೂಜೆ ಸಲ್ಲಿಸಿದ್ದ ಸುಮಲತಾ, ಅಲ್ಲಿಂದ ತಂದಿದ್ದ ಲಾಡು ಪ್ರಸಾದವನ್ನು ಅಂಬಿ ಸಮಾಧಿ ಮೇಲಿಟ್ಟು ಪೂಜೆ ಸಲ್ಲಿಸಿ ಬಳಿಕ ಹಂಚಿದರು. ಪುತ್ರ ಅಭಿಷೇಕ್, ರಾಕ್​ಲೈನ್ ವೆಂಕಟೇಶ್, ನಟ ದೊಡ್ಡಣ್ಣ ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಕೆ ವೇಳೆ ನಟ ದರ್ಶನ್, ಯಶ್ ಸೇರಿ ಚಿತ್ರರಂಗದ ಹಲವು ತಾರೆಯರು, ಅಂಬಿ ಅಭಿಮಾನಿಗಳು ಪಾಲ್ಗೊಳ್ಳುವರು.

ಮಂಜುಗಿಲ್ಲ ಕೈ ಬೆಂಬಲ

ಹಾಸನದಲ್ಲಿ ಬಿಜೆಪಿ ಅಭ್ಯರ್ಥಿಯಾಗುತ್ತಿ ರುವ ಮಾಜಿ ಸಚಿವ ಎ.ಮಂಜುಗೆ ಕಾಂಗ್ರೆಸ್​ನಿಂದ ನಿರೀಕ್ಷಿತ ಬೆಂಬಲ ಸಿಗುತ್ತಿಲ್ಲ. ಮಂಜು ಕಾಂಗ್ರೆಸ್​ನಲ್ಲಿದ್ದಾಗ ಸ್ಥಳೀಯ ಮುಖಂಡರೊಂದಿಗೆ ಹೊಂದಾಣಿಕೆಯಿಂದ ಇರಲಿಲ್ಲ. ಇದೀಗ ಬಹುತೇಕ ಮುಖಂಡರು ಪಕ್ಷದ ನಿರ್ಧಾರಕ್ಕೆ ಬದ್ಧವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಡೂರಿನ ಪರಾಜಿತ ಅಭ್ಯರ್ಥಿ ಆನಂದ್ ನೇರವಾಗಿಯೇ ಬೆಂಬಲ ನೀಡಲು ಸಾಧ್ಯವಿಲ್ಲವೆಂಬ ಮಾತನ್ನು ದಾಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸರ್ಕಾರ ಇದ್ದು ದೇವೇಗೌಡರ ಎದುರು 50 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಈ ಬಾರಿ ಮಂಜು ಹೋರಾಟ ಎಷ್ಟರಮಟ್ಟಿಗೆ ಇರಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಸಭೆ: ಹಾಸನ ಜಿಲ್ಲೆ ಮುಖಂಡರೊಂದಿಗೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಬುಧವಾರ ಸಭೆ ನಡೆಸಲಿದ್ದಾರೆ.

ಮಂಡ್ಯದಲ್ಲಿ ರಂಗೇರಿದ ಕಾವು

ಮಂಡ್ಯ: ಲೋಕಸಭಾ ಚುನಾವಣೆ ಕಾವು ಮಂಡ್ಯ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ರಂಗೇರುತ್ತಿದೆ. ಮೂರು ಪಕ್ಷಗಳ ಪೈಕಿ ಜೆಡಿಎಸ್​ನಿಂದ ಮಾತ್ರ ಅಧಿಕೃತ ಅಭ್ಯರ್ಥಿ ಕಣಕ್ಕಿಳಿದಿದ್ದರೆ ಉಳಿದೆಲ್ಲರ ಪರವಾಗಿ ಸುಮಲತಾ ಅಂಬರೀಷ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಧುಮುಕಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮುನ್ನವೇ ಸುಮಲತಾ ಹಾಗೂ ನಿಖಿಲ್ ಬಿರುಸಿನ ಪ್ರಚಾರದಲ್ಲಿ ತೊಡಗಿರುವುದು ಕಣ ರಂಗೇರಲು ಮತ್ತೊಂದು ಕಾರಣವಾಗಿದೆ.

ಜಾಲತಾಣ, ಸಾರ್ವಜನಿಕವಾಗಿ ಪರ ವಿರೋಧ ಚರ್ಚೆಗಳು ಬಿರುಸು ಪಡೆದಿವೆ. ಅಂಬರೀಷ್ ಕೊಡುಗೆ ಬಗ್ಗೆ ಜೆಡಿಎಸ್​ನವರು ಪ್ರಶ್ನೆ ಮಾಡುತ್ತಿದ್ದರೆ, ಜೆಡಿಎಸ್ ಕುಟುಂಬ ರಾಜಕಾರಣದ ಬಗ್ಗೆ ಅಂಬಿ ಅಭಿಮಾನಿಗಳು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರೂ ಪ್ರಶ್ನಿಸುತ್ತಿದ್ದಾರೆ. ದೋಸ್ತಿಯಾಗಿ ಜೆಡಿಎಸ್-ಕಾಂಗ್ರೆಸ್ ಕಣಕ್ಕಿಳಿದಿವೆಯಾದರೂ ಮಂಡ್ಯಕ್ಕೆ ಸಂಬಂಧಿಸಿದಂತೆ ಮೈತ್ರಿ ಅಪಥ್ಯ ಎಂಬುದಕ್ಕೆ ಪ್ರಸ್ತುತ ಸುಮಲತಾ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದೇ ಸಾಕ್ಷಿ. ಇದೆಲ್ಲದರ ನಡುವೆ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೋ? ಬೇಡವೋ? ಎಂಬ ನಿರ್ಧಾರ ತೆಗೆದುಕೊಳ್ಳಲು ಇನ್ನೂ ಗೊಂದಲದಲ್ಲೇ ಸಿಲುಕಿದೆ.

ಸಿಎಂ ರಣತಂತ್ರ: ಮಂಗಳವಾರ ದಿಢೀರನೇ ಕೆಆರ್​ಎಸ್​ನ ಖಾಸಗಿ ಹೋಟೆಲ್​ಗೆ ಆಗಮಿಸಿದ ಸಿಎಂ ಕುಮಾರಸ್ವಾಮಿ, ಪುತ್ರನನ್ನು ಗೆಲ್ಲಿಸುವ ಕುರಿತು ಜಿಲ್ಲೆಯ ಪಕ್ಷದ ಶಾಸಕರು, ಸಚಿವರೊಂದಿಗೆ ರಾತ್ರಿ ಬಹುಹೊತ್ತಿನವರೆಗೂ ಸಮಾಲೋಚನೆಯಲ್ಲಿ ತೊಡಗಿದ್ದರು.

ಯೋಗಾ ರಮೇಶ್ ಕಾಂಗ್ರೆಸ್ ತೆಕ್ಕೆಗೆ

ಹಾಸನ ಜಿಲ್ಲಾ ಬಿಜೆಪಿ ನಾಯಕ ಯೋಗಾ ರಮೇಶ್ ಪಕ್ಷ ತೊರೆದು ಕಾಂಗ್ರೆಸ್ ಸೇರುವುದು ನಿಚ್ಚಳವಾಗಿದೆ. ಎ.ಮಂಜು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ, ಅಭ್ಯರ್ಥಿ ಆಗುತ್ತಿರುವುದರಿಂದ ರಿವರ್ಸ್ ಆಪರೇಷನ್​ಗೆ ಮುಂದಾದ ಕಾಂಗ್ರೆಸ್-ಜೆಡಿಎಸ್ ನಾಯಕರು ಸ್ಥಳೀಯ ಸಂಸ್ಥೆಯಲ್ಲಿನ ಬಿಜೆಪಿ ಸದಸ್ಯರನ್ನು ತೆಕ್ಕೆಗೆ ಸೆಳೆಯಲು ಮುಂದಾಗಿದ್ದಾರೆ. ಯೋಗಾ ರಮೇಶ್ ಮಂಗಳವಾರ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

- Advertisement -

Stay connected

278,463FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...