ನಾನು ಹಾಕಿದ ಪ್ರತಿ ಹೆಜ್ಜೆಗೆ ಕಾಂಗ್ರೆಸ್​ ಕಾರ್ಯಕರ್ತರೇ ಕಾರಣ, ಬೆಂಬಲಿಸಿದ ಎಲ್ಲರಿಗೂ ಧನ್ಯವಾದ: ಸುಮಲತಾ ಅಂಬರೀಷ್​

Latest News

ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ

ತ್ಯಾಗರ್ತಿ: ಪ್ರಾಚೀನ ದೇವಾಲಯಗಳು ಸಮಾಜದ ಆಸ್ತಿ ಆಗಿದ್ದು ಇವುಗಳ ಸಂರಕ್ಷಣೆ ಮಾಡಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಪ್ರಫುಲ್ಲಾ ಮಧುಕರ್ ಹೇಳಿದರು. ಸಮೀಪದ...

ಗ್ರಾಮಸ್ಥರ ಒಕ್ಕಲೆಬ್ಬಿಸಲು ಬಿಡಲ್ಲ

ಹೊಳೆಹೊನ್ನೂರು: ಸರ್ಕಾರಿ ಜಮೀನುಗಳಲ್ಲಿ ವಾಸ ಮಾಡುತ್ತಿರುವ ಗ್ರಾಮಸ್ಥರನ್ನು ಯಾವುದೆ ಕಾರಣಕ್ಕೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ ಎಂದು ಗ್ರಾಮಾಂತರ ಶಾಸಕ ಅಶೋಕ್​ನಾಯ್್ಕ ಅಭಯ ನೀಡಿದರು. ಭದ್ರಾವತಿ ತಾಲೂಕಿನ...

ಐನ್​ಸ್ಟೀನ್​ ಸಿದ್ಧಾಂತಕ್ಕೇ ಸವಾಲು ಹಾಕಿದ್ದ ಭಾರತದ ಗಣಿತಜ್ಞ ವಶಿಷ್ಠ ನಾರಾಯಣ ಸಿಂಗ್​ ನಿಧನ

ಪಟನಾ: ಜರ್ಮನಿ ಮೂಲದ ಪ್ರಖ್ಯಾತ ವಿಜ್ಞಾನಿ ಆಲ್ಬರ್ಟ್​ ಐನ್​ಸ್ಟೀನ್​ ಅವರ ಸಾಪೇಕ್ಷೆ ಸಿದ್ಧಾಂತಕ್ಕೆ ಸವಾಲು ಹಾಕಿದ್ದ ಭಾರತದ ಪ್ರಖ್ಯಾತ ಗಣಿತಜ್ಞ ವಶಿಷ್ಠ ನಾಯಾರಣ...

ಚಮಚಾಗಿರಿ ಮಾಡ್ಕೊಂಡು ಟಿಕೆಟ್ ಪಡೆದವನಿಗೆ ಮನುಷ್ಯತ್ವ ಇದೆಯಾ?: ನಾರಾಣಗೌಡ ವಿರುದ್ಧ ಮಾಜಿ ಸಿಎಂ ಎಚ್​ಡಿಕೆ ವಾಗ್ದಾಳಿ

ಮಂಡ್ಯ: ಚಮಚಾಗಿರಿ ಮಾಡಿಕೊಂಡು ನಾರಾಯಣಗೌಡ ನನ್ನ ಬಳಿ ಎರಡನೇ ಬಾರಿಗೆ ಟಿಕೆಟ್ ಪಡೆದು ಹೋದ. ಅವನಿಗೆ ಮನುಷ್ಯತ್ವ ಇದೆಯಾ ಎಂದು ಪ್ರಶ್ನಿಸುವ ಮೂಲಕ...

ಬಾಲಿವುಡ್​ನ ದಿಗ್ಗಜ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್​ ಆರೋಗ್ಯ ಸ್ಥಿರ: ಬ್ರೀಚ್​ ಕ್ಯಾಂಡಿ ಆಸ್ಪತ್ರೆ ಪ್ರಕಟಣೆ

ಮುಂಬೈ: ಬಾಲಿವುಡ್​ನ ದಿಗ್ಗಜ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್​ ಅವರ ಆರೋಗ್ಯ ಸ್ಥಿತರವಾಗಿದೆ. ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ವೈದ್ಯರು...

ಮಂಡ್ಯ: ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ನನಗೆ ಕ್ಷೇತ್ರದಾದ್ಯಂತ ಉತ್ತಮ ಜನ ಬೆಂಬಲ ಸಿಕ್ಕಿತು. ನಾನು ಹಾಕಿದ ಪ್ರತಿ ಹೆಜ್ಜೆಗೆ ಕಾಂಗ್ರೆಸ್ ಕಾರ್ಯಕರ್ತರು ಕಾರಣಕರ್ತರಾಗಿದ್ದಾರೆ. ಹಾಗೆಯೇ ಬಹಿರಂಗ ಬೆಂಬಲ ನೀಡಿದ ಬಿಜೆಪಿ, ರೈತಸಂಘಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿದರು.

ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ವೇಳೆ ವಿವಿಧ ಸಂಘಟನೆಗಳಿಂದ ದೊರೆತ ಬೆಂಬಲ ನನ್ನನ್ನು ಮತ್ತಷ್ಟು ಬಲಿಷ್ಠವಾಗಿಸಿದವು. ಡಾ.ರವೀಂದ್ರ ಸ್ವಾಭಿಮಾನಿ ಪಾದಯಾತ್ರೆ ಮಾಡಿದರು. ಕೆಆರ್ ಪೇಟೆ ಅಭಿಮಾನಿಯೊಬ್ಬರು ಉರುಳು ಸೇವೆ ಮಾಡಿದ್ದಾರೆ. ಚಿತ್ರರಂಗದ ದರ್ಶನ್, ಯಶ್, ದೊಡ್ಡಣ್ಣ, ರಾಕ್ ಲೈನ್ ಅವರಿಂದ ಉತ್ತಮ ಬೆಂಬಲ ದೊರೆತಿದ್ದು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಮಂಡ್ಯದಲ್ಲಿ ಶೇ.80ರಷ್ಟು ಮತದಾನ ಆಗಿದ್ದು, ಇದು ಮಂಡ್ಯ ಇತಿಹಾಸದಲ್ಲಿಯೇ ದಾಖಲೆಯ ಮತದಾನವಾಗಿದೆ. ಬೆಂಗಳೂರಿನಲ್ಲಿ ಎಲ್ಲ ಸೌಲಭ್ಯಗಳಿದ್ದರೂ ಮತದಾನವಾಗಿಲ್ಲ. ಆದರೆ ಕೆಲ ಸೌಲಭ್ಯಗಳಿಲ್ಲದ ಗ್ರಾಮೀಣ ಭಾಗವಾದ ಮಂಡ್ಯದಲ್ಲಿ ಜನ ಅತಿ ಹೆಚ್ಚು ಮತದಾನ ಮಾಡಿದ್ದಾರೆ. ಮಹಿಳೆಯರು ಹೆಚ್ಚಾಗಿ ಮತದಾನ ಮಾಡಿದ್ದಾರೆ ಎಂದರು.

ಈ ಚುನಾವಣೆಯಲ್ಲಿ ಯಾರು ನನ್ನ ಬೆಂಬಲಕ್ಕೆ ನಿಂತಿದ್ದರೋ ಅಂತವರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ. ಇದು ಗಂಭೀರ ವಿಚಾರವಾಗಿದೆ. ಅಧಿಕಾರದಲ್ಲಿದ್ದವರು ಈ ರೀತಿ ಮಾಡಬೇಡಿ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ತರುವುದಾಗಿ ತಿಳಿಸಿದರು.

ಕಾರ್ಯಕರ್ತರನ್ನ ಕುಗ್ಗಿಸಬಾರದೆಂದು ನನ್ನ ನೋವನ್ನು ನಾನೇ ನುಂಗಿಕೊಂಡೆ ಎಂದ ಸುಮಲತಾ, ನಿಜಕ್ಕೂ ನನಗೆ ಇದೊಂದು ಒಳ್ಳೆ ಅನುಭವವಾಗಿದೆ ಎಂದರು. ಯುದ್ಧದಂತೆ ಚುನಾವಣೆ ನಡೆದಿರಬಹುದು, ಆದರೆ ಹೆಚ್ಚು ಬಾಂಬ್ ದಾಳಿ ನನ್ನ ಮೇಲೆ ಆಗಿದೆ. ಆದರೆ ನಾನು ಸರ್ಜಿಕಲ್ ಸ್ಟ್ರೈಕ್ ಮಾಡಲ್ಲ, ಸಿಕ್ಸರ್ ಹೊಡಿಬೇಕು ಅಷ್ಟೇ. ನಮಗೆ ಮಂಡ್ಯನೇ ಸಿಂಗಾಪೂರ್ ಆಗಿದ್ದು ಜೆಡಿಎಸ್​ನವರು ಪ್ರಾರಂಭದಿಂದ‌ ಕೊನೆಯವರೆಗೆ ಅಂಬರೀಶ್ ಅಂತ್ಯಕ್ರಿಯೆಯಲ್ಲೇ ರಾಜಕಾರಣ ಮುಗಿಸಿದ್ದಾರೆ ಎಂದು ವ್ಯಂಗ್ಯವಾಡಿದರು.(ದಿಗ್ವಿಜಯ ನ್ಯೂಸ್​)

- Advertisement -

Stay connected

278,465FansLike
562FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...