ಸೌಖ್ಯವನದಲ್ಲಿ ಚಿಣ್ಣರ ಬೇಸಿಗೆ ಶಿಬಿರ

1 Min Read
camp
ಸೌಖ್ಯಯೋಗ ಟ್ರಸ್ಟ್ ಹೆಬ್ರಿ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಚಿಣ್ಣರ ಬೇಸಿಗೆ ಶಿಬಿರ ಉದ್ಘಾಟಿಸಿದರು.

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಇಲ್ಲಿಯ ಕ್ಷೇಮ ಹಾಲ್‌ನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಎರಡು ದಿವಸ ಚಿಣ್ಣರ ಬೇಸಿಗೆ ಶಿಬಿರ ನಡೆಯಿತು.

ಪ್ರಥಮ ದಿನ 103 ಚಿಣ್ಣರು ಭಾಗವಹಿಸಿದ್ದರು.ಟ್ರಸ್ಟ್ ನಿವೃತ್ತ ಜಿಲ್ಲಾ ಶಿಕ್ಷಣಾಧಿಕಾರಿ ಹಾಗೂ ಸೌಖ್ಯಯೋಗ ಹೆಬ್ರಿ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಶಿಬಿರ ಉದ್ಘಾಟಿಸಿದರು.

ಶ್ರೀ ಧರ್ಮಸ್ಥಳ ಜನಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್ ಮಾತನಾಡಿ ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ಚಿಕ್ಕ ವಯಸ್ಸಿನಲ್ಲಿಯೇ ಯಾವ ರೀತಿಯ ಕೊಡುಗೆ ನೀಡಬಹುದು ಎಂಬುದಾಗಿ ತಿಳಿಸಿದರು.

ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ ಮಾತನಾಡಿದರು. ಮಕ್ಕಳಿಗೆ ಯೋಗಾಭ್ಯಾಸ, ಗಾರ್ಡನಿಂಗ್, ನಡಿಗೆ, ಭಾರತೀಯ ನೃತ್ಯಗಳು, ಹಗ್ಗಜಗ್ಗಾಟ ಮುಂತಾದ ಕಾರ್ಯಕ್ರಮ ಆಯೋಜಿಸಿ ಕೊನೆಗೆ ಪೌಷ್ಟಿಕ ಆಹಾರ ನೀಡಲಾಯಿತು.

ಆಸ್ಪತ್ರೆ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಸ್ವಾಗತಿಸಿ, ಡಾ.ನವ್ಯತಾ ಬಲ್ಲಾಳ್ ವಂದಿಸಿದರು. ಆಸ್ಪತ್ರೆಯ ಎಲ್ಲ ವೈದ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಮಕ್ಕಳಿಗೆ ವಿವಿಧ ರೀತಿಯ ಚಟುವಟಿಕೆ ನಡೆಸಿಕೊಟ್ಟರು.

See also  ವಿದ್ಯಾರ್ಥಿಗಳು ಅವಕಾಶ ಸದ್ಬಳಕೆ ಮಾಡಿಕೊಂಡಾಗ ಯಶಸ್ಸು: ಪ್ರಸಾದ್
Share This Article